ಮಂಡ್ಯ

ನಿಖಿಲ್ ಬಂಧನಕ್ಕೆ ಪ್ಲ್ಯಾನ್ ಬಗ್ಗೆ ಗೊತ್ತಿಲ್ಲ ; ಚೆಲುವರಾಯಸ್ವಾಮಿ

ಮಂಡ್ಯ : ನಿಖಿಲ್‌ ಕುಮಾರಸ್ವಾಮಿ ಬಂಧನಕ್ಕೆ ಸಚಿವರೊಬ್ಬರಿಂದ ಷಡ್ಯಂತ್ರ ಆರೋಪ ವಿಚಾರ , ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಪ್ಲ್ಯಾನ್‌ ಮಾಡುವಂತದ್ದು ಏನು ಇಲ್ಲ  ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿಖಿಲ್‌ ಬಂಧನಕ್ಕೆ ಯಾರು ಪ್ಲ್ಯಾನ್‌ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ನನಗೆ ಗೊತ್ತಿಲ್ಲದೆ ಇರೋದ್ರ ಬಗ್ಗೆ ಮಾತನಾಡೋಲ್ಲ. ವಿಜಯೇಂದ್ರನನ್ನ ಪೊಲೀಸರು ವಶಕ್ಕೆ ಪಡೆದಿದ್ದರು ಆಮೇಲೆ ಬಿಟ್ಟರು. ಇದನ್ನೆಲ್ಲಾ ಪ್ಲ್ಯಾನ್‌ ಮಾಡೋದು ಏನಿದೆ. ಸಾರ್ವಜನಿಕರಿಗೆ ತೊಂದರೆ ಆಗಿದೆ ಅಂದಾಗ ವಶಕ್ಕೆ ತೆಗೆದುಕೊಂಡಿದ್ದಾರೆ ಆಮೇಲೆ ಬಿಡುತ್ತಾರೆ. ಅದು ಯಾವ ವಿಚಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

ಅಲ್ಲದೆ ದೇವೇಗೌಡರ ಕುಟುಂಬ ಮುಗಿಸಲು ಈ ರೀತಿ ಮಾಡ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಕುಟುಂಬದವರೇ ರೇವಣ್ಣ ವಿಚಾರವನ್ನು ಅತೀ ಹೆಚ್ಚು  ಮಾಧ್ಯಮ ಮುಂದೆ ಚರ್ಚೆ ಮಾಡಿದ್ದು. ಆದರೆ ಅವರು ಜೈಲಿಗೆ ಹೋದ ಮೇಲೆ ಯಾಕೆ ಏನು ಮಾತನಾಡುತ್ತಿಲ್ಲ. ಇದರಲ್ಲಿ ಬಹಳ ಆಶ್ಚರ್ಯ ಜೊತೆಗೆ ಅರ್ಥಮಾಡಿಕೊಳ್ಳುವುದು ಇದೆ. ನನಗೂ ಇದು ಸಮಾಧಾನ ತರುವಂತದ್ದು ಅಲ್ಲ. ನನಗೂ ಸತ್ಯ ಗೊತ್ತಿಲ್ಲ, ಸತ್ಯ ಗೊತ್ತಿಲ್ಲದೆ ನಾನು ಏನು ಹೇಳಲಿ. ಇದೆಲ್ಲಾ ಪರಿಸ್ಥಿತಿಗಳು. ನಾವು ತಪ್ಪು ಮಾಡಲಿ ಇನ್ನೋಬ್ಬರು ತಪ್ಪು ಮಾಡಲಿ ಕಾನೂನು ಅದು. ನಾವು ಏನು ಮಾಡೊಕ್ಕೆ ಆಗಲ್ಲ, ಕಾನೂನು ಪ್ರಕಾರ ಹೋಗಬೇಕು ಅಷ್ಟೆ ಎಂದು ಹೇಳಿದರು.

 

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago