Mysore
23
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಸಚಿವರಿಂದ ಬಾಬು ಜಗಜೀವನ ರಾಂ ಪ್ರತಿಮೆಗೆ ಮಾಲಾರ್ಪಣೆ

ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾಲಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Tags:
error: Content is protected !!