small food processing enterprises to be established in the state Chaluvarayaswamy
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ ತೆರೆಯಲು 105 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಸಿದ್ದ ಎಂದು ಪತ್ರ ಬರೆದಿರುವ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನಡೆಯನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶ್ಲಾಘಿಸಿದ್ದಾರೆ.
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಕಳೆದ ಮೂರು ದಿನದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ಉದ್ದೇಶಿತ ಯೋಜನೆ ಜಾರಿ ಮಾಡಲು ನೂರು ಎಕರೆ ಭೂಮಿ ಅಗತ್ಯವಿದೆ. ಅದಷ್ಟು ಬೇಗ ಭೂಮಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು.
ಈ ಪತ್ರ ಕುರಿತಂತೆ ರಾಜ್ಯ ಸರ್ಕಾರ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ರವರಿಗೆ ವಿಳಂಬ ಮಾಡದಂತೆ ಅಗತ್ಯ ಭೂಮಿ ಗುರುತಿಸುವಂತೆ ಸೂಚನೆ ನೀಡಲಾಗಿತ್ತು. ಈ ಸೂಚನೆಯಂತೆ ಜಿಲ್ಲಾಧಿಕಾರಿಗಳು ಮಂಡ್ಯ ತಾಲ್ಲೂಕು ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಹಳ್ಳಿ ಬಳಿ 105 ಎಕರೆ ಸರ್ಕಾರಿ ಭೂಮಿ ಖಾಲಿ ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಭೂಮಿಯು ನಾಗಮಂಗಲ- ಮಂಡ್ಯ ರಾಜ್ಯ ಹೆದ್ದಾರಿಗೆ ಕೇವಲ 500 ಮೀಟರ್ ದೂರದಲ್ಲಿರುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರದಿಂದ ಕೈಗಾರಿಕೆ ಸ್ಥಾಪಿಸಲು ಅಗತ್ಯ ಭೂಮಿ ನೀಡುತ್ತಿಲ್ಲ ರಾಜ್ಯದ ಯಾವ ಸಚಿವರು ನನಗೆ ಮನವಿ ಮಾಡಿಲ್ಲವೆಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಯವರು ಆರೋಪಿಸುತ್ತಿದ್ದರು.
ಆದರೆ ರಾಜ್ಯ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ರವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಅಧಿಕೃತವಾಗಿ ಪತ್ರ ಬರೆದುತಾವು ಉದ್ದೇಶಿಸಿರುವ ಕೈಗಾರಿಕೆಗೆ ಅಗತ್ಯ ಭೂಮಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ಆದಕಾರಣ ಆಟೋಮೋಟಿವ್ ರಿಸರ್ಚ್ ಅಸೋಷಿಯನ್ ಆಪ್ ಇಂಡಿಯಾ, ಕೇಂದ್ರ ಸರ್ಕಾರದ ತಂಡ ಮತ್ತು ARAI ತಂಡಗಳು ಜಂಟಿಯಾಗಿ ರಾಜ್ಯಕ್ಕೆ ಭೇಟಿ ನೀಡಿ ಉದ್ದೇಶಿತ ಜಾಗ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಅಗತ್ಯ ನೆರವು ಪಡೆದುಕೊಳ್ಳಲಿ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇನ್ನಾದರೂ ಕೇಂದ್ರ ಸಚಿವರು ಯಾವುದೇ ಸಬೂಬು ಹೇಳದೆ ಕೇಂದ್ರ ಸರ್ಕಾರದ ಕೈಗಾರಿಕೆಯನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ನಿರುದ್ಯೋಗಿಗಳ ಯುವಕರ ನೆರವಿಗೆ ಮುಂದಾಗಲಿ ಎಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…