ಮಂಡ್ಯ

ಆದಿಚುಂಚನಗಿರಿ ಕ್ಷೇತ್ರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಸಚಿವ ಎನ್‌ ಎಸ್‌ ಭೋಸರಾಜು ಭೇಟಿ

ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವ ಭರವಸೆ

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣಗೊಳಿಸುವ ಹಾಗೂ ತಾರಾಲಯ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ನೀಡಿದರು.

ಇಂದು ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದು ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು.

2018-19 ನೇ ಸಾಲಿನಲ್ಲಿ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸುಮಾರು 7 ಕೋಟಿ ರೂಪಾಯಿಗಳ ಅನುದಾನ ಕೂಡಾ ಮೀಸಲಿಡಲಾಗಿದೆ. ಈ ಕೇಂದ್ರದ ಕಟ್ಟಡವನ್ನು ಇನ್ಫಿನಿಟಿ ಆಕಾರದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಕಟ್ಟಡ ಕಾಮಗಾರಿಯು ಪ್ರಗತಿಯಲ್ಲಿದೆ. ಇದನ್ನ ಚುರುಕುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ,  ಕ್ಷೇತ್ರದಲ್ಲಿ ತಾರಾಲಯ ನಿರ್ಮಾಣದ ಬಗ್ಗೆಯೂ ಪ್ರಸ್ತಾಪಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಪ್ರಸ್ತಾವನೆ ಸಲ್ಲಿಕೆಯ ನಂತರ ಇಲಾಖೆಯ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷನೆ ನಡೆಸಿದ ಸಚಿವರು, ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ಉಪ ವಿಜ್ಞಾನ ಕೇಂದ್ರದ ಕಾಮಗಾರಿಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸರಕಾರದ ವತಿಯಿಂದ ಅಗತ್ಯ ಸಹಕಾರ ದೊರೆಯಲಿದೆ ಎಂದು ಸಚಿವರು ಸ್ವಾಮೀಜಿಗಳಿಗೆ ತಿಳಿಸಿದರು.

ಮಠಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಪ್ರಸನ್ನನಾಥ ಸ್ವಾಮೀಜಿಗಳಿಂದ ಸಚಿವರು ಆಶೀರ್ವಾದ ಸ್ವೀಕರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ: 18 ಲಕ್ಷದ 69 ಸಾವಿರ ರೂ. ಸಂಗ್ರಹ

ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ…

13 hours ago

ಎಥೆನಾಲ್‌ ಮಿಶ್ರಣ: 63 ಸ್ಯಾಂಪಲ್‌ ಪರೀಕ್ಷೆಗೆ ಕಳಿಸಿದರೂ ಫಲಿತಾಂಶ ಕೊಟ್ಟಿಲ್ಲ ಎಂದ ರಿಜ್ವಾನ್‌ ಅರ್ಷದ್‌!

ಬೆಂಗಳೂರು: ಪೆಟ್ರೋಲ್‌ನಲ್ಲಿ ಮಿತಿ ಮೀರಿದ ಎಥೆನಾಲ್‌ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್‌ಗಳ ಫಲಿತಾಂಶ ನೀಡಿಲ್ಲ ಎಂದು…

13 hours ago

ಬಿಳಿಗಿರಿರಂಗನ ಬೆಟ್ಟದ ವರದತ್ತಿ ಮಂಟಪೋತ್ಸವ: ವರದೇ ನಾಯಕರ ಕುಲಪರಂಪರೆಯ ಜೀವಂತ ಸಾಕ್ಷಿ

ಯಳಂದೂರು: ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ತಿರುವೆಂಗಳನಾಥ ಸ್ವಾಮಿ ದೇವಾಲಯಕ್ಕೂ ಯಳಂದೂರು ಮೂಲದ ವರದೇ…

13 hours ago

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: ಮೂರು ತಿಂಗಳಲ್ಲಿ ಹೊಸ ಆ್ಯಪ್‌ ಎಂದ ಸಚಿವ ಯು.ಟಿ. ಖಾದರ್‌!

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್‌ ಆ್ಯಪ್‌ ತರಲು ಯೋಜಿಸಲಾಗಿದೆ.…

14 hours ago

ಬಾಳೆಗೊನೆಯಲ್ಲಿ ಡ್ರಗ್ಸ್‌ ಸಾಗಾಟ ಪ್ರಕರಣ: ನಂಜನಗೂಡು ನಂಟಿನ ಬಗ್ಗೆ ಎಸ್ಪಿ ಸ್ಪಷ್ಟನೆ

ಮೈಸೂರು: ಬಾಳೆಗೊನೆ ಮೂಲಕ ಡ್ರಗ್ಸ್‌ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ…

15 hours ago

ಬಿಜೆಪಿಯವರು ರೀಲ್ಸ್‌ ರಾಜರು’: ತೇಜಸ್ವಿ ಸೂರ್ಯ ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

ಬೆಂಗಳೂರು:  ‘ಬಿಜೆಪಿಯವರು ರೀಲ್ಸ್‌ ರಾಜರು. ಬೆಂಗಳೂರಿಗೆ ಹೊಸ ಯೋಜನೆ ತಂದಿದ್ದಾರಾ?’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಮೆಟ್ರೋ ವಿಚಾರದಲ್ಲಿ…

17 hours ago