ಮಂಡ್ಯ: ನಗರಸಭೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಮಂಡ್ಯ ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣದ ಕಾಮಗಾರಿಗೆ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ನಂತರ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ಮಾತನಾಡಿ ಕ್ರೀಡಾಪಟುಗಳಿಗೆ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಪ್ರೋತ್ಸಾಹಿಸಲು ಗ್ರೀನ್ ಮ್ಯಾಟ್ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ ಎಂದರು.
ಕ್ರೀಡಾಂಗಣದಲ್ಲಿ ವಿವಿಧ ರೀತಿಯ ಕ್ರೀಡೆಗಳಾದ ವಾಲಿಬಾಲ್, ಥ್ರೋ ಬಾಲ್, ಕ್ರಿಕೆಟ್ ಫುಟ್ ಬಾಲ್ ಆಡಬಹುದು. ಇಂತಹ ಕ್ರೀಡಾಂಗಣ ಬೆಂಗಳೂರಿನಲ್ಲಿದ್ದು, ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿದೆ. 3 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಕೃಷಿ ಸಚಿವರಿಂದಲೇ ಉದ್ಘಾಟಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್, ಉಪಾಧ್ಯಕ್ಷ ಎಂ ಟಿ ಅರುಣ್ ಕುಮಾರ್, ಸದಸ್ಯ ಬಿ.ಪಿ ಪ್ರಕಾಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.





