Mysore
22
overcast clouds

Social Media

ಮಂಗಳವಾರ, 26 ಮೇ 2026
Light
Dark

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಪವನ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ.

ಏಪ್ರಿಲ್.‌2ರಂದು ಮನೆಯಿಂದ ಕೆಲಸಕ್ಕೆ ತೆರಳಿದ್ದ ಪವನ್‌ ಮತ್ತೆ ಮನೆಗೆ ವಾಪಸ್‌ ಬಂದಿರಲಿಲ್ಲ. ಬಳಿಕ ಮನೆಯವರು ಹಾಗೂ ಸ್ನೇಹಿತರು ಪವನ್‌ಗಾಗಿ ಹುಡುಕಾಟ ನಡೆಸಿದ್ದರು.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೋಮವಾರ ಪವನ್‌ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.

ಪವನ್‌ನನ್ನು ಕೊಲೆ ಮಾಡಿ ಬಳಿಕ ನದಿಗೆ ಎಸೆಯಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

Tags:
error: Content is protected !!