ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಪವನ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ.
ಏಪ್ರಿಲ್.2ರಂದು ಮನೆಯಿಂದ ಕೆಲಸಕ್ಕೆ ತೆರಳಿದ್ದ ಪವನ್ ಮತ್ತೆ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ಮನೆಯವರು ಹಾಗೂ ಸ್ನೇಹಿತರು ಪವನ್‌ಗಾಗಿ ಹುಡುಕಾಟ ನಡೆಸಿದ್ದರು.
ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೋಮವಾರ ಪವನ್ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಪವನ್‌ನನ್ನು ಕೊಲೆ ಮಾಡಿ ಬಳಿಕ ನದಿಗೆ ಎಸೆಯಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…