ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಪರಿಶೀಲನಾ ಸಭೆಯನ್ನು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ನಡೆಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವಿದ್ಯಾರ್ಥಿಯು 90 ದಿನಗಳಲ್ಲಿ ಕನಿಷ್ಟ 40 ಅಂಕಗಳನ್ನು ಪಡೆಯುವಂತೆ ಮಾಡಲು ಕ್ರಮವಹಿಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಫಲಿತಾಂಶ ಉತ್ತಮಗೊಳಿಸಲು ನೇಮಕ ಮಾಡಲಾಗಿರುವ 56 ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
ಡಿಸೆಂಬರ್ 18,19,&20ನೇ ತಾರೀಖುಗಳಂದು ಜಿಲ್ಲೆಯ ಎಲ್ಲಾ ಹೈಸ್ಕೂಲ್ ಗಳಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 40 ಅಂಕಗಳಿಗೆ ಅಭ್ಯಾಸ ಪರೀಕ್ಷೆ ನೀಡುವಂತೆ ಸೂಚಿಸಲಾಗಿದ್ದು, ಸದರಿ ಪರೀಕ್ಷೆಯಲ್ಲಿ ಶೇಕಡ 50ಕ್ಕಿಂತ ಕಡಿಮೆ ಅಂಕ ಪಡೆದ 5221 ವಿದ್ಯಾರ್ಥಿಗಳಿಗೆ ಹೆಚ್ಚಿನ ವಿಶೇಷ ಗಮನ ಹರಿಸಿ ವಿಶೇಷ ತರಗತಿಗಳನ್ನು ತೆಗೆದುಕಳ್ಳುವಂತೆ ಸೂಚಿಸಲಾಗಿದೆ ಎಂದರು.
ಸಿ.ಎಸ್.ಆರ್. ಅನುದಾನದಡಿ ಮಕ್ಕಳಿಗೆ ನೋಟ್ ಬುಕ್ ವಿತರಣೆಗೆ ಕ್ರಮ
ಅಭ್ಯಾಸ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭ್ಯಾಸ ನಡೆಸಲು ನೋಟ್ ಬುಕ್ ಗಳ ಕೊರತೆ ಎದುರಾಗುತ್ತದೆಂಬ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಸಿ.ಎಸ್.ಆರ್. ಅನುದಾನದಡಿ ನೋಟ್ ಬುಕ್ ಗಳನ್ನು ಪಡೆದು ಶಾಲೆಗೆ ವಿತರಿಸಲು ಪ್ರಯತ್ನಿಸಲಾಗುವುದು ಎಂದು ಮಾಹಿತಿ ನೀಡಿದರು. ಈಗಾಗಲೇ ಕೆಲವು ಸಂಸ್ಥೆಗಳಿಗೆ ತಮ್ಮ ಸಿ.ಎಸ್.ಆರ್. ಅನುದಾನದಡಿ ನೋಟ್ ಬುಕ್ ಗಳನ್ನು ವಿತರಣೆ ಮಾಡುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದರು.
ಮೇಲ್ವಿಚಾರಣಾ ಸಮಿತಿ ರಚನೆ;
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರಾಂಶುಪಾಲರು, ಡಯಟ್, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಅಧಿಕಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆರವರನ್ನೊಳಗೊಂಡ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:-ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?
ಕಾರ್ಯನಿರ್ವಾಹಕ ಅಧಿಕಾರಿಗಳು ಎಸ್.ಎಸ್,ಎಲ್.ಸಿ. ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಕಾಲ ಕಾಲಕ್ಕೆ ವರದಿ ನೀಡಬೇಕು ಹಾಗೂ ಫಲಿತಾಂಶ ಉತ್ತಮಗೊಳಿಸುವ ಸಂಬಂಧ ಗ್ರಾ.ಪಂ. ಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಅಗತ್ಯ ಸಹಕಾರ ನೀಡುವಂತೆ ನಿರ್ದೇಶನ ನೀಡಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಉತ್ತಮ ಫಲಿತಾಂಶ ಸಾಧನೆ ಮಾಡುವ ಬಿಇಓ, ಹೆಚ್.ಎಂ. ಮತ್ತು ನೋಡಲ್ ಅಧಿಕಾರಿಗಳಿಗೆ ಬಹುಮಾನ:
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಶಾಲೆಯ ಮುಖ್ಯೋಪದ್ಯಾಯರು, ನೋಡಲ್ ಅಧಿಕಾರಿಗಳು ಮತ್ತು ಬಿಇಓ ಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಸಿಇಓ ಅವರು ತಿಳಿಸಿದರು.
ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣದಲ್ಲಿ ಕಡಿಮೆ ಫಲಿತಾಂಶ:
ಅಭ್ಯಾಸ ಪರೀಕ್ಷೆಯಲ್ಲಿ ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಶಾಲೆಗಳಲ್ಲಿ ಶೇಕಡ 50ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇದ್ದು, ಈ ತಾಲ್ಲೂಕುಗಳಲ್ಲಿ ವಿಶೇಷ ಗಮನ ಹರಿಸುವಂತೆ ಸಿಇಓ ಅವರು ನೋಡಲ್ ಅಧಿಕಾರಿಗಳು ಮತ್ತು ಬಿಇಓ ಗಳಿಗೆ ಸೂಚಿಸಿದರು. ಮಂಡ್ಯ ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಉತ್ತಮ ಫಲಿತಾಂಶ ಬದ್ದಿದ್ದು, ಶೇಕಡ 90ಕ್ಕೆ ಪ್ರಗತಿಯನ್ನು ಹೆಚ್ಚಿಸುವಂತೆ ಸಂಬಂಧಪಟ್ಟ ಬಿಇಓ ಮತ್ತು ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
ನಿವೃತ್ತ ಅಡುಗೆ ಸಿಬ್ಬಂದಿಗಳ ಇಡಿಗಂಟು ಮೊತ್ತವನ್ನು ಹೊಸ ವರ್ಷಕ್ಕೆ ನೇರವಾಗಿ ಜಮೆ ಮಾಡುವಂತೆ ಕ್ರಮವಹಿಸಲು ಸೂಚನೆ:
2022ನೇ ಸಾಲಿನಿಂದ ಬಾಕಿ ಉಳಿದಿದ್ದ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ 217 ಅಡುಗೆ ಸಿಬ್ಬಂದಿಗಳಿಗೆ 1 ಜನವರಿ 2026ರ ಹೊಸ ವರ್ಷದಂದು ಸರ್ಕಾರದ ನಿರ್ದೇಶನದಂತೆ ನೇರವಾಗಿ ಸಂಬಂಧಪಟ್ಟವರ ಖಾತೆಗೆ ಇಡಿಗಂಟು ಪಾವತಿಸಲು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು. ಬಿಸಿಯೂಟ ಸಿಬ್ಬಂದಿಗಳ ಹಿತಾಸಕ್ತಿ ರಕ್ಷಿಸುವ ನಿಟ್ಟಿನಲ್ಲಿ ಇದೆ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಲೋಕೇಶ್ ಜಿ, ಡಯಟ್ ಪ್ರಾಂಶುಪಾಲರಾದ ಯೋಗೇಶ್, ಮಧ್ಯಾಹ್ನದ ಬಿಸಿಯೂಟ ಯೋಜನೆಯ ಶಿಕ್ಷಣಾಧಿಕಾರಿ ರವಿಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…