ಮಂಡ್ಯ : ಶಾಸಕ ಗಣಿಗ ರವಿಕುಮಾರ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಉದ್ಯಮಿ ಅಶೋಕ್ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಈ ಸಂಬಂಧ ಜನಪ್ರತಿನಿಧಿ ನ್ಯಾಯಾಲಯಕ್ಕೆ ರವಿ ಹಾಜರಾಗಿದ್ದರು.
೨೦೧೩ರಲ್ಲಿ ನೈಸ್ ರಸ್ತೆಗೆ ಸಂಬಂಧಿಸಿದಂತೆ ಜೆಡಿಎಸ್‌ನಿಂದ ಬೃಹತ್ ಪರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆಚ್.ಡಿ.ದೇವೇಗೌಡರ ಜೊತೆ ಗಣಿಗ ರವಿಕುಮಾರ್ ಕೂಡ ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ರವಿ ಕುಮಾರ್ ಅಶೋಕ್ ಖೇಣಿ ಮೇಲೆ ಹಲ್ಲೆಗೆಯತ್ನಿಸಿದ್ದಾರೆ ಎಂದು ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು.
ಈ ಸಂಬಂಧ ಮ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗಲು ಎಷ್ಟೇ ಆದೇಶ ಬಂದಿದ್ದರು ರವಿ ಕುಮಾರ್ ನಿರಾಕರಿಸಿದ್ದರು. ಈ ಬಾರಿ ನಾನ್ ಬೇಲ್‌ಎಬಲ್ ವಾರೆಂಟ್ ನೀಡಲಾಗಿತ್ತು.
ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ರವಿಕುಮಾರ್ ಅವರನ್ನು ಪೊಲೀಸರ ವಶಕ್ಕೆ ಪಡೆಯುವಂತೆ ನ್ಯಾಯಾಲಯ ಆದೇಶ ಮಾಡಿದೆ. ಆದೇಶದ ಮೇರೆಗೆ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…