ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್ ರವಿಕುಮಾರ್ ಗೌಡ ಗಣಿಗ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಎಲ್ಲಾ ರಸ್ತೆಗಳು ಹಾಗೂ ನಾಲೆಗಳನ್ನು ಅಭಿವೃದ್ಧಿ ಮಾಡಿಸುತ್ತೇವೆ. ಗ್ರಾಮದಲ್ಲಿ ನಡೆಯುವ ಕಾಮಗಾರಿಗಳನ್ನು ಗ್ರಾಮಸ್ಥರು ಗುಣಮಟ್ಟದಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.





