MLA Udaya inaugurates houses built for civic workers
ಮದ್ದೂರು : ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆಯ ಖಾಯಂ ಪೌರಕಾರ್ಮಿಕರಿಗೆ ಅಂದಾಜು 1.95 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರಸ್ತುತ 16 ಮನೆಗಳನ್ನು ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರಿಸಲಾಗಿದೆ. ಉಳಿದ 7 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಪೌರ ಕಾರ್ಮಿಕರಿಗೆ ವಿತರಣೆ ಮಾಡಲಾಗುವುದು ಎಂದರು.
ಪೌರ ಕಾರ್ಮಿಕರು ಇತರ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾಮಿರ್ಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ. ಇಡೀ ಪಟ್ಟಣವನ್ನು ಸ್ವಚ್ಛವಾಗಿಡಲು ದಿನನಿತ್ಯ ಶ್ರಮಿಸುತ್ತಿರುವ ಪೌರ ಕಾರ್ಮಿಕರು ಇತರ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ ಎಂದರು.
ರಾಮ್ ರಹೀಂ ನಗರ, ಚನ್ನೇಗೌಡ ಬಡಾವಣೆ ನಿವಾಸಿಗಳು ಹಲವು ವರ್ಷಗಳಿಂದ ವಾಸವಾಗಿದ್ದಾರೆ. ಇವರಿಗೆ ಹಕ್ಕು ಪತ್ರ ನೀಡಿಲ್ಲ ಇದಕ್ಕೆ ಅಧಿಕಾರಿಗಳ ಈ ಹಿಂದೆ ಇದ್ದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಈ ಬಗ್ಗೆ ನಾನು ಶೀಘ್ರದಲ್ಲೇ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ ಇಇ ಆರ್.ಪ್ರತಾಪ್, ಎಇಇ ರಾಘವೇಂದ್ರ, ಪುರಸಭೆ ಅಧ್ಯಕ್ಷೆ ಕೆ.ಪಿ.ಕೋಕಿಲಾ ಅರುಣ್ ಕುಮಾರ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಪ್ರಮೀಳಾ, ಎಂ.ಬಿ.ಸಚ್ಚಿನ್, ಸುರೇಶ್ ಕುಮಾರ್, ಸುಮಿತ್ರಾ ರಮೇಶ್, ಸರ್ವಮಂಗಳ, ಕಮಲ್ ನಾಥ್, ಬಸವರಾಜು, ಪ್ರಭಾರ ಮುಖ್ಯಾಽಕಾರಿ ಶ್ರೀಧರ್ ಹಾಜರಿದ್ದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…