ಮಂಡ್ಯ

ಮದ್ದೂರು | ಪೌರಕಾರ್ಮಿಕರಿಗೆ ನಿರ್ಮಿಸಿರುವ ಮನೆಗಳನ್ನು ಉದ್ಘಾಟಿಸಿದ ಶಾಸಕ ಉದಯ

ಮದ್ದೂರು : ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆಯ ಖಾಯಂ ಪೌರಕಾರ್ಮಿಕರಿಗೆ ಅಂದಾಜು 1.95 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪ್ರಸ್ತುತ 16 ಮನೆಗಳನ್ನು ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರಿಸಲಾಗಿದೆ. ಉಳಿದ 7 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಪೌರ ಕಾರ್ಮಿಕರಿಗೆ ವಿತರಣೆ ಮಾಡಲಾಗುವುದು ಎಂದರು.

ಪೌರ ಕಾರ್ಮಿಕರು ಇತರ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾಮಿರ್ಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ. ಇಡೀ ಪಟ್ಟಣವನ್ನು ಸ್ವಚ್ಛವಾಗಿಡಲು ದಿನನಿತ್ಯ ಶ್ರಮಿಸುತ್ತಿರುವ ಪೌರ ಕಾರ್ಮಿಕರು ಇತರ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ ಎಂದರು.

ರಾಮ್ ರಹೀಂ ನಗರ, ಚನ್ನೇಗೌಡ ಬಡಾವಣೆ ನಿವಾಸಿಗಳು ಹಲವು ವರ್ಷಗಳಿಂದ ವಾಸವಾಗಿದ್ದಾರೆ. ಇವರಿಗೆ ಹಕ್ಕು ಪತ್ರ ನೀಡಿಲ್ಲ ಇದಕ್ಕೆ ಅಧಿಕಾರಿಗಳ ಈ ಹಿಂದೆ ಇದ್ದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಈ ಬಗ್ಗೆ ನಾನು ಶೀಘ್ರದಲ್ಲೇ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ ಇಇ ಆರ್.ಪ್ರತಾಪ್, ಎಇಇ ರಾಘವೇಂದ್ರ, ಪುರಸಭೆ ಅಧ್ಯಕ್ಷೆ ಕೆ.ಪಿ.ಕೋಕಿಲಾ ಅರುಣ್ ಕುಮಾರ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಪ್ರಮೀಳಾ, ಎಂ.ಬಿ.ಸಚ್ಚಿನ್, ಸುರೇಶ್ ಕುಮಾರ್, ಸುಮಿತ್ರಾ ರಮೇಶ್, ಸರ್ವಮಂಗಳ, ಕಮಲ್ ನಾಥ್, ಬಸವರಾಜು, ಪ್ರಭಾರ ಮುಖ್ಯಾಽಕಾರಿ ಶ್ರೀಧರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago