ಮಂಡ್ಯ: ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರವಿದೆ. ನಾವು ರೈತರ ನೆರವಿಗೆ ಧಾವಿಸಬೇಕು. ಹಲವು ಬಾರಿ ದೆಹಲಿ ದಂಡೆಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಪರಿಪರಿಯಾಗಿ ಬೇಡಿದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಲಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 27 ಮಂದಿ ಬಿಜೆಪಿ ಸಂಸದರೂ ರಾಜ್ಯದ ಜನಕ್ಕಾಗಿ ಯಾವತ್ತು ಮೋದಿಯವರನ್ನ ಪ್ರಶ್ನಿಸಿಲ್ಲ, ಇಂತಹ ಸಂಸದರು ನಮಗೆ ಬೇಕೇ ಎಂದು ಕಿಡಿಕಾರಿದರು.
ಬಿಜೆಪಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿಲ್ಲ. ಕೇಂದ್ರದ ಕೃಷಿ ಸಬ್ಸಿಡಿ ಕಡಿತವಾಗಿದೆ. ಬರದ ಬೇಗುದಿಗೆ ಸ್ಪಂದಿಸದ ಮೈತ್ರಿ ಪಕ್ಷಗಳ ನಡೆ ವಿರುದ್ಧ ಮತದಾರ ಜಾಗೃತನಾಗಿ, ಆ ಮೂಲಕ ಎನ್.ಡಿ.ಎ ನೇತೃತ್ವದ ಬಿಜೆಪಿಯನ್ನು ಜನರು ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಎಚ್.ಡಿ ಕುಮಾರಸ್ವಾಮಿ ಕುಟುಂಬ ರಾಜ್ಯದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದೆ. ಅಧಿಕಾರದಲ್ಲಿದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಶಾಶ್ವತ ಯೋಜನೆ ನೀಡದ ಕುಮಾರಸ್ವಾಮಿ ಅವರು ಸಂಸದರಾಗಿ ಏನು ಮಾಡಲು ಸಾಧ್ಯ ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದು, ಮತದಾರರು ಇದನ್ನು ಅರ್ಥೈಸಿಕೊಂಡು ಧರ್ಮ, ಜಾತಿ , ಸುಳ್ಳು ಹಾಗೂ ಭಾವನಾತ್ಮಕ ಮಾತುಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…