Mysore
22
broken clouds

Social Media

ಸೋಮವಾರ, 13 ಜನವರಿ 2025
Light
Dark

ಮೇ 30 ರಂದು ಹಣ ಬಿಡುಗಡೆ ಸಮಿತಿ ಸಭೆ

ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ – 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಪ್ತಿಯಾಗಿರುವ ನಗದು ಹಣವನ್ನು ಬಿಡುಗಡೆ ಮಾಡಲು ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಹಣ ಬಿಡುಗಡೆ ಸಮಿತಿಯನ್ನು ರಚಿಸಿರುತ್ತಾರೆ. ಹಣ ಬಿಡುಗಡೆ ಸಮಿತಿ ಸಭೆಯನ್ನು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಲೋಕಸಭಾ ಚುನಾವಣೆ – 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ/ತಾಲ್ಲೂಕು ಉಪಖಜಾನೆಯ ವಶದಲ್ಲಿರಿಸಲಾಗಿರುತ್ತದೆ.

ಈ ಹಣವು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಖಾತ್ರಿಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ಸಂಚಾಲಕರು ಮತ್ತು ನೋಡಲ್ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: