ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ತೀವ್ರ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ಸ್‌ಗಳಾಗಿದ್ದು, ಸದ್ಯ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಇದನ್ನು ಓದಿ: ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ: ಆಘಾತಕಾರಿ ವರದಿ ಬಹಿರಂಗ
124.80 ಗರಿಷ್ಠ ಮಟ್ಟದ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಲ್ಲಿ ಗರಿಷ್ಠ ಸಾಮರ್ಥ್ಯವಾದ 49.452 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ.
ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಾದಂತೆ ಯಾವುದೇ ಕ್ಷಣದಲ್ಲಾದರೂ ಹೊರಹರಿವನ್ನು ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





