ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 1,210 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೇಲುಕೋಟೆ ವೈರಾಮುಡಿ ಬ್ರಹ್ಮೋತ್ಸವದ ಸಂಬಂಧ ಕುರಿತು ಪತ್ರಿಕಾಗೋಷ್ಠಿ ನಡಸಿ ಮಾತನಾಡಿದ ಅವರು, ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಾಲಯದಲ್ಲಿ 2026 ನೇ ಸಾಲಿನ ವೈರಮುಡಿ ಬ್ರಹ್ಮೋತ್ಸವ ಮಾರ್ಚ್ 23ರಿಂದ ಪ್ರಾರಂಭವಾಗಿ ಏಪ್ರಿಲ್04 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾರ್ಚ್ 28 ರಂದು ಶ್ರೀ ವೈರಮುಡಿ ಕಿರೀಟಧಾರಣೆ ಉತ್ಸವ ನೆಡೆಯಲಿದೆ. ಶ್ರೀವೈರಮುಡಿ ಬ್ರಹೋತ್ಸವ ಸಂಬಂಧ ದೇವಾಲಯ ಮತ್ತು ಇತರೆ ಇಲಾಖೆಗಳಿಂದ ಶ್ರೀಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿರುವ ಪೂರ್ವಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳ ಸಿದ್ದತಾ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಶ್ರೀವೈರಮುಡಿ ಬ್ರಹೋತ್ಸವ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷದಷ್ಟು ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಶ್ರೀ ವೈರಮುಡಿ ಕಿರೀಟಧಾರಣೆ ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ. ವತಿಯಿಂದ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಪ್ರಮುಖ ಪಟ್ಟಣ/ ನಗರ ಭಾಗಗಳಿಂದ ಸುಮಾರು 140 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮುಂಗಡ ಸೀಟು ಕಾಯ್ದಿರಿಸುವ ವ್ಯವಸ್ಥೆ ಹಾಗೂ ಮಂಡ್ಯ ನಗರದಿಂದ ನಿರಂತರ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಮೇಲುಕೋಟೆಯ ವಲಯ ಅರಣ್ಯಾಧಿಕಾರಿಗಳ ಕಛೇರಿಯ ಎದುರಿನ ಅವರಣದಲ್ಲಿ ಕೆಎಸ್‌ಆರ್‌ಟಿಸಿ ವಾಹನಗಳಿಗೆ ತಾತ್ಕಾಲಿವಾಗಿ ನಿಲ್ಯಾಣ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ದೇವಾಲಯದವರೆಗೆ ಓಡಾಡಲು ಎಲ್ಲಾ ಹಿರಿಯ ನಾಗರೀಕರಿಗೆ ಹಾಗೂ ಸಾರ್ವಜನಿಕರಿಗೆ ಮತ್ತು ಗರ್ಭಿಣಿಯರಿಗೆ 5 ಉಚಿತ ಮಿನಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು/ಭಕ್ತಾಧಿಗಳ ಓಡಾಟಕ್ಕೆ ತೊಂದರೆಯಾಗದಂತೆ ವಾಹನಗಳ ದಟ್ಟಣೆ ನಿರ್ವಹಿಸಲು ಅಗತ್ಯ ಬ್ಯಾರಿಕೇಡ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ತಿಳಿಸಿದರು.
ತುರ್ತು ಅವಘಡಗಳ ನಿರ್ವಹಣೆಗಾಗಿ ಎರಡು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಕ್ಷೇತ್ರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತಾ ವ್ಯವಸ್ಥೆಯ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ದಾಸೋಹ ವ್ಯವಸ್ಥೆ
ದೇವಾಲಯದ ದಾಸೋಹ ಭವನದಲ್ಲಿ ವೈರಮುಡಿ ಬ್ರಹೋತ್ಸವ ನಡೆಯುವ ದಿನ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ ಮಾರ್ಚ್ 28 ರಂದು ಬೆಳಿಗೆ 08-00 ಗಂಟೆಯಿಂದ ಮಾರ್ಚ್ 29 ರಂದು ಬೆಳಿಗೆ 08-00 ಗಂಟೆಯವರೆಗೆ ನಿರಂತರವಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಿ.ಸಿ.ಕ್ಯಾಮರಾಗಳ ಕಣ್ಗಾವಲು
ಕ್ಷೇತ್ರದ ಭದ್ರತೆಯ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದೇವಾಲಯ ಮತ್ತು ಗ್ರಾಮದ ಪ್ರಮುಖ ಭಾಗಗಳಾದ ಬಸ್ ನಿಲ್ದಾಣ, ವಾಹನ ಪಾರ್ಕಿಂಗ್, ದೊಡ್ಡ ಕಲ್ಯಾಣಿ ಬಳಿ, ದಾಸೋಹ ಭವನ, ಮುಖ್ಯ ರಸ್ತೆಗಳು, ಪೊಲೀಸ್ ಠಾಣೆ ಬಳಿ, ಚೆಲುವ ನಾರಾಯಣಸ್ವಾಮಿ ದೇವಾಲಯದ ಸುತ್ತಲು ಸುಮಾರು 40 ಶಾಶ್ವತ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಾಹನ ಪಾರ್ಕಿಂಗ್ ಮತ್ತು ಇತರ ಕಡೆಗಳಲ್ಲಿ ಹೆಚ್ಚುವರಿ 40 ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್ ಅಧಿಕ್ಷಕರು ವಿ. ಜೆ ಶೋಭರಾಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಕೆ. ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಟಿ. ಕೆ. ಹರೀಶ್ ಉಪಸ್ಥಿತರಿದ್ದರು.
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…