ಮಂಡ್ಯ

ಕೋಟಿಗಟ್ಟಲೆ ಹಣ ದೋಚಿ ತಾಯಿ-ಮಗಳು ಪರಾರಿ

ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ ಘಟನೆ ನಗರದ ಹೊಸಹಳ್ಳಿಯಲ್ಲಿ ನಡೆದಿದೆ.

ಹೊಸಹಳ್ಳಿಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ ಪುತ್ರಿ ದಿವ್ಯಾ ಎಂಬವರೇ ಅಕ್ಕಪಕ್ಕದವರನ್ನು ನಂಬಿಸಿ ಕೋಟಿಗಟ್ಟಲೆ ಹಣ ಪಡೆದು ಪರಾರಿಯಾಗಿರುವವರು. ನಗರದ ಹೊಸಹಳ್ಳಿ ಬಡಾವಣೆಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ತಾಯಿ ಗಿರಿಜಮ್ಮ ಹಾಗೂ ಮಗಳು ದಿವ್ಯಾ ಅಕ್ಕಪಕ್ಕದ ಮನೆಯವರ ವಿಶ್ವಾಸ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ರಾತ್ರೋ ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇವರ ಚಾಲಾಕಿತನಕ್ಕೆ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸದ್ಯ ತಾಯಿ, ಮಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ತಾಯಿ-ಮಗಳ ಈ ಕಿಲಾಡಿ ಜೋಡಿ ಸಾಲದ ಮೊತ್ತ ಮರು ಪಾವತಿಸದ ಹಿನ್ನೆಲೆ ವಿವಿಧ ಸಂಘಗಳು, ಮೈಕ್ರೋ ಫೈನಾನ್ಸ್ಗಳು, ಸಂಘದ ಸಹ ಸದಸ್ಯರು, ಸಾಲಕ್ಕೆ ಮಧ್ಯಸ್ಥಿಕೆ ವಹಿಸಿದ್ದವರ ದುಂಬಾಲು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಹಲವು ಮಹಿಳೆಯರು ಭಯಭೀತರಾಗಿದ್ದಾರೆ.

ಇವರ ನಂಬಿ ಸ್ತ್ರೀಶಕ್ತಿ, ಸ್ವಸಹಾಯ ಸಂಘ ಹಾಗೂ ಮೈಕ್ರೋ ಫೈನಾನ್ಸ್ಗಳಲ್ಲಿ ಜಾಮೀನು ಹಾಕಿರುವ ಬಡಕುಟುಂಬದ ಮಹಿಳೆಯರು, ಕೋಟಿಗಟ್ಟಲೆ ಹಣ ದೋಚಿ ಪರಾರಿಯಾದ ತಾಯಿ-ಮಗಳನ್ನು ಹುಡುಕಲು ಫ್ಲೆಕ್ಸ್ ಚಳವಳಿ ನಡೆಸುತ್ತಿದ್ದಾರೆ. ನಗರದ ಪ್ರಮುಖ ವೃತ್ತಗಳಲ್ಲಿ ಫ್ಲೆಕ್ಸ್ ಹಾಕಿ ಆರೋಪಿಗಳ ಪತ್ತೆಗಾಗಿ ಹಾಗೂ ಮಾಹಿತಿಗಾಗಿ ಮನವಿ ಮಾಡಿದ್ದಾರೆ.

ವಂಚಕ ತಾಯಿ, ಮಗಳ ನಡೆಯಿಂದ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಕೂಲಿನಾಲಿ ಮಾಡಿ, ಸಣ್ಣಪುಟ್ಟ ವ್ಯಾಪಾರ, ವ್ಯವಹಾರ ನಡೆಸುತ್ತಿದ್ದ ಕುಟುಂಬಗಳು, ಮಹಿಳೆಯರನ್ನೇ ಈ ಕಿಲಾಡಿ ಜೋಡಿ ಟಾರ್ಗೆಟ್ ಮಾಡಿ ವಂಚಿಸಿದೆ ಎನ್ನಲಾಗಿದೆ. ಈ ಘಟನೆ ಸಂಬAಧ ಮೋಸ ಹೋದವರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿ, ಆದಷ್ಟು ಬೇಗ ತಾಯಿ-ಮಗಳನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಪಿಎಂ-ಸಿಎಂ ಗುಟ್ಟು ರಟ್ಟು ; ಸಂಭಾಷಣೆ ರಹಸ್ಯ ಬಿಚ್ಚಿಟ್ಟ ಸಿಎಂ

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ…

4 mins ago

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…

29 mins ago

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

39 mins ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

1 hour ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

2 hours ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

2 hours ago