Mysore
23
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

ಮದುವೆಗೆ ನಿರಾಕರಿಸಿದ ಪ್ರಿಯಕರ: ಯುವತಿ ಸೂಸೈಡ್: ಪುತ್ರಿ ಸಾವಿನ ಬಳಿಕ ತಾಯಿ ಆತ್ಮಹತ್ಯೆ

ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ಧಾರುಣ ಘಟನೆಯೊಂದು ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಗಳು ವಿಜಯಲಕ್ಷ್ಮೀ ಹಾಗೂ ತಾಯಿ ಲಕ್ಷ್ಮೀ ಎಂದು ಗುರುತಿಸಲಾಗಿದೆ.

ಕಳೆದ ಕೆಲ ವರ್ಷಗಳಿಂದ ಮಾರಸಿಂಗನಹಳ್ಳಿ ಹರಿಕೃಷ್ಣ ಹಾಗೂ ವಿಜಯಲಕ್ಷ್ಮೀ ಪರಸ್ಪರ ಪ್ರೀತಿಸುತ್ತಿದ್ದರು. ಯಾಕೋ ಏನೋ ಇದ್ದಕ್ಕಿದ್ದಂತೆ ಹರಿಕೃಷ್ಣ ಬೇರೆ ಹುಡುಗಿ ಜೊತೆ ಸುತ್ತಾಟ ನಡೆಸಲು ಶುರುಮಾಡಿದ್ದ. ಇದನ್ನು ಪ್ರಶ್ನಿಸಿದ ವಿಜಯಲಕ್ಷ್ಮೀಗೆ ನಿನ್ನನ್ನು ಯಾವುದೇ ಕಾರಣಕ್ಕೂ ಮದುವೆಯಾಗಲ್ಲ ಎಂದು ಹೇಳಿದ್ದ.

ಈ ಹಿನ್ನೆಲೆಯಲ್ಲಿ ಮನನೊಂದ ವಿಜಯಲಕ್ಷ್ಮೀ ಕಳೆದ 20 ದಿನಗಳ ಹಿಂದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು.

ಮಗಳ ಸಾವಿಗೆ ನ್ಯಾಯ ಸಿಗಲೆಂದು ಒತ್ತಾಯಿಸಿ ತಂದೆ ನಂಜುಂಡೇಗೌಡ ಠಾಣೆಗೆ ದೂರು ಕೊಡಲು ಹೋಗಿದ್ದರು. ಈ ವೇಳೆ ನ್ಯಾಯ ಕೇಳಲು ಹೋದವರ ಮೇಲೆಯೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದರಿಂದ ತೀವ್ರವಾಗಿ ಮನನೊಂದಿದ್ದ ತಾಯಿ ಲಕ್ಷ್ಮೀ ಮಗಳ ಸಾವಿಗೆ ನ್ಯಾಯವೂ ಇಲ್ಲ. ನಮಗೆ ನೆಮ್ಮದಿಯೂ ಇಲ್ಲ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Tags: