ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಬುಧವಾರ ಭೂತನ ಹೊಸೂರು ಗ್ರಾಮದ ದೇವಯ್ಯ ಮತ್ತು ಮಹದೇವ ಎಂಬುವವರ ಜಮೀನಿನಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿರುವ ಬಗ್ಗೆ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದರು.
ನಂತರ ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡ ಸಿಬ್ಬಂದಿ ರಾತ್ರಿ ವೇಳೆಗೆ ಅದೇ ಸ್ಥಳದಲ್ಲಿ ಮರಿಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆ ಸೆರೆಗೆ ಬಲೆ ಬೀಸಿದ್ದರು. ಇಂದು ಮುಂಜಾನೆ ತಾಯಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…