ಮಂಡ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ತಾಯಿ,ಮಗ ಆತ್ಮಹತ್ಯೆ: ಗ್ರಾಮಕ್ಕೆ ಆರ್‌.ಅಶೋಕ್‌ ಭೇಟಿ

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

ಮನೆ ಸೀಜ್‌ ವೇಳೆ ಬ್ಯಾಂಕ್‌ ಸಿಬ್ಬಂದಿಗಳು ವರ್ತಿಸಿದ ಬಗ್ಗೆ ಮೃತ ಪ್ರೇಮ ಅವರ ಪುತ್ರಿಯರು ಆರ್‌.ಅಶೋಕ್‌ ಬಳಿ ವಿವರಿಸಿ ಅಳಲು ತೋಡಿಕೊಂಡರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

2 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

2 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

2 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago