ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
ಮನೆ ಸೀಜ್ ವೇಳೆ ಬ್ಯಾಂಕ್ ಸಿಬ್ಬಂದಿಗಳು ವರ್ತಿಸಿದ ಬಗ್ಗೆ ಮೃತ ಪ್ರೇಮ ಅವರ ಪುತ್ರಿಯರು ಆರ್.ಅಶೋಕ್ ಬಳಿ ವಿವರಿಸಿ ಅಳಲು ತೋಡಿಕೊಂಡರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…