ಮಂಡ್ಯ

`ಶಾಸನ’ ಸಂರಕ್ಷಣೆ ಎಲ್ಲರ ಹೊಣೆ

ಮಂಡ್ಯ: ಜಿಲ್ಲೆಯ ಪೂರ್ವದ ಇತಿಹಾಸವನ್ನು ಶಾಸನಗಳು ತಿಳಿಸುತ್ತದೆ. ಶಾಸನಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು.

ಇಂದು (ಫೆ.14) ಪ್ರಸಿದ್ಧ ಆತಗೂರು “ಕಾಳಿ” ಹೆಸರಿನ ನಾಯಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನಾ ಸಮಾರಂಭ ಹಾಗೂ ಕೆರೆ ಕಟ್ಟೆಗಳ ಅಳಿವು ಉಳಿವು ಕುರಿತು ಅಧಿಕಾರಿಗಳೊಂದಿಗೆ ಒಂದು ಚಿಂತಾವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಪಂಚದಲ್ಲೇ ಯಾವ ದೇಶದಲ್ಲೂ ಇರದ ಐತಿಹಾಸಿಕ ಪರಂಪರೆಯನ್ನು ಭಾರತ ದೇಶ ಹೊಂದಿದೆ ಎಂದರು.

ಆತಗೂರು “ಕಾಳಿ” ಹೆಸರಿನ ನಾಯಿ ಶಾಸನ ತನ್ನದೇ ಆದ ವಿಶೇಷ ಮಹತ್ವ ಹೊಂದಿದೆ ಅದನ್ನು ಸಂರಕ್ಷಿಸಲು ಜಿಲ್ಲಾಡಳಿತ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಕೆರೆಕಟ್ಟೆಗಳ ಸಂರಕ್ಷಣೆ ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ಕೆಲಸ, ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಇರಬೇಕು ಆಗ ಮಾತ್ರ ಕೆರೆಗಳ ಸಂರಕ್ಷಣೆಯಲ್ಲಿ ಸುಧಾರಣೆ ಕಾಣಬಹುದಾಗಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಹ ಕೆರೆ ಸಂರಕ್ಷಣೆಗೆ ಸಹ ಹಲವಾರು ಯೋಜನೆ ಹಾಗೂ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ, ಪ್ರಾಣಿಗಳನ್ನು ಗೌರವದಿಂದ ಕಾಣಬೇಕು ಎನ್ನುವುದಕ್ಕೆ ಈ ಒಂದು ಶಾಸನ ನಿಜಕ್ಕೂ ಸಾಕ್ಷಿಯಾಗಿದೆ. ಶಾಸನಗಳನ್ನು ಒಂದು ಕಲ್ಲು ಎಂದು ಪರಿಗಣಿಸದೆ‌ ಅದರಲ್ಲಿ ಇರುವ ಒಳ ಅರ್ಥವನ್ನು ಅರಿತಾಗ ಅದರ ಮಹತ್ವವೇನು ಎಂದು ತಿಳಿಯುತ್ತದೆ. ನಮ್ಮ ಪರಂಪರೆ, ಇತಿಹಾಸಗಳಿಗೆ ಸಾಕ್ಷಿಯಾಗಿರುವ ಶಾಸನಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.

ಮಂಡ್ಯ ಜಿಲ್ಲೆ ಕಲೆ, ಸಂಸ್ಕೃತಿ ಇತಿಹಾಸದಲ್ಲಿ ಶ್ರೀಮಂತಿಕೆ ಹೊಂದಿರುವ ಜಿಲ್ಲೆ, ಜಿಲ್ಲೆಯಲ್ಲಿ 1000 ಕ್ಕೂ ಹೆಚ್ಚು ಶಾಸನಗಳು ಲಭ್ಯವಿದ್ದು ಎಲ್ಲವೂ ಸಹ ನಮ್ಮ ಸಂಸ್ಕೃತಿ ಇತಿಹಾಸದ ಮಹತ್ವವನ್ನ ತಿಳಿಸಿ ಹೇಳುವ ಶಾಸನಗಳಾಗಿವೆ. ನಾವು ಮುಂದಿನ ಪೀಳಿಗೆಗೆ ಶಾಸನಗಳನ್ನು ಉಳಿಸಿಕೊಡಲು ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಪೂರ್ವಜರ ಕಾಲದಿಂದಲೂ ಬಳುವಳಿಯಾಗಿ ಬಂದಿರುವ ಕೆರೆಗಳನ್ನ ಉಳಿಸಿಕೊಂಡು ಹೋಗಬೇಕಾಗಿದೆ. ಗ್ರಾಮಗಳು ಹಾಗೂ ಕೆರೆಗಳಿಗೆ ಅವಿಭಾಜ್ಯ ಸಂಬಂಧವಿದೆ. ಕೆರೆಗಳನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದರ ಉಳಿವಿಗೆ ನಾವು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳುವಳಿಕೆ ಹೇಳಿದರು.

ಜಿಲ್ಲೆಯಲ್ಲಿ ಸುಮಾರು 967 ಕೆರೆಗಳಿವೆ ಅವುಗಳನ್ನು ಗುರುತಿಸಿ ಸರ್ವೇ ಮಾಡಿ ಒತ್ತುವರಿ ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ. ಪ್ರತಿ ತಿಂಗಳಿಗೊಮ್ಮೆ ಸಭೆ ಆಯೋಜಿಸಿ ಸಂರಕ್ಷಣೆಯ ಬಗ್ಗೆ ಎಲ್ಲಾ ಅಧಿಕಾರಿಗಳು ಸೂಚನೆ ನೀಡುತ್ತಿದ್ದೇನೆ ಎಂದರು.

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆಯುವುದರಿಂದಲೂ ಕೆರೆಗಳಿಗೆ ಹಾನಿವುಂಟಾಗುವ ಸಾಧ್ಯತೆಗಳು ಹೆಚ್ಚು. ಹೀಗಾಗಿ ಕೆರೆಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರವು ಬಹಳ ಮುಖ್ಯ, ಸಾರ್ವಜನಿಕರಿಗೆ ಕೆರೆ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಲೇಖಕ ಹಾಗೂ ಸಂಶೋಧಕರಾದ ತೈಲೂರು ವೆಂಕಟಕೃಷ್ಣ ಅವರು ಮಾತನಾಡಿ ಇತಿಹಾಸದ ವೈಭವವನ್ನು ಸಾರುವ ಅನೇಕ ದೇವಾಲಯಗಳು, ಸ್ಮಾರಕಗಳು, ಶಾಸನಗಳನ್ನು ಸಂರಕ್ಷಣೆ ಮಾಡಬೇಕಾಗಿದೆ, ಆತಗೂರು ನಾಯಿ ಶಾಸನವನ್ನು ಅಮೇರಿಕಾದ ಒಂದು ವಿಶ್ವವಿದ್ಯಾನಿಲಯದ ವಸ್ತುಸಂಗ್ರಹಾಲಯದಲ್ಲಿ ನೂರು ವರ್ಷ ಹಿಂದೆಯೇ ಅದರ ಪ್ರತಿಕೃತಿಯನ್ನು ಸ್ಥಾಪಿಸಲಾಗಿದೆ ಎಂದರೆ ಇದರ ಮಹತ್ವ ಅರಿತುಕೊಳ್ಳಿ ಎಂದರು.

ಕೆರೆಗಳನ್ನು ಸಂರಕ್ಷಿಸಿಕೊಳ್ಳದೆ ಹೋದರೆ ಮುಂದಿನ ಪೀಳಿಗೆಗೆ ಇದರ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ, ಕೆರೆಕಟ್ಟೆಗಳನ್ನು ಕನ್ನಡಿಯಂತೆ ಸೂಕ್ಷ್ಮವಾಗಿ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ಶಾಸನಗಳ ಮೌಲ್ಯದ ಬಗ್ಗೆ ಅನೇಕರಿಗೆ ಅರಿವಿಲ್ಲ, ಶಾಸನಗಳ ಮೌಲ್ಯದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಿದೆ, ಶಾಸನಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅವುಗಳನ್ನು ಸಂರಕ್ಷಿಸಬೇಕಾಗಿದೆ, ಸಾರ್ವಜನಿಕರು ನಮ್ಮ ನೆಲದ ಶಾಸನಗಳನ್ನು ಹೆಮ್ಮೆಯಿಂದ ಕಾಳಜಿಯಿಂದ ಕಾಣುವಂತಾಗಬೇಕು ಎಂದು ಹೇಳಿದರು.

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಕೆ.ಹೆಚ್. ಗೋಪಾಲಕೃಷ್ಣೇಗೌಡ ಮಾತನಾಡಿ, ನಗರೀಕರಣದಿಂದ ಕೆರೆಕಟ್ಟೆಗಳನ್ನು ಮುಚ್ಚಿ ಕಟ್ಟಡಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ, ಕೆರೆಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕಾಗಿದೆ, ಜನಜೀವನಕ್ಕೆ ಕೆರೆಗಳು ಎಷ್ಟು ಮುಖ್ಯ ಎಂಬುದು ಸಾರ್ವಜನಿಕರ ಅರ್ಥೈಸಿಕೊಳ್ಳಬೇಕು ಹಾಗೂ ಆತಗೂರು ಶಾಸನದ ಬಗ್ಗೆ ಜಿಲ್ಲೆಯ ಸಾರ್ವಜನಿಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಇತಿಹಾಸ ಸಂಶೋಧಕರಾದ ಮೊಹಮ್ಮದ್ ಕಲೀಂ, ಸಿ. ಮಹದೇವ್, ಹರವು ದೇವೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

17 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

18 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

18 hours ago