ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್‌ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಇವನು ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗನಾಗಿದ್ದಾನೆ. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾಏಕಿ ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.
ಹಂತಕರಿಂದ ಪ್ರಜ್ವಲ್ ತಪ್ಪಿಸಿಕೊಳ್ಳಲು ಪ್ರತಯ್ನಿಸಿದರೂ ಸಾದ್ಯವಾಗಿಲ್ಲ. ತೀವ್ರ ರಕ್ತಸ್ರಾವದಿಂದ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಪ್ರಜ್ವಲ್ ಮೇಲಿನ ಹಲ್ಲೆ ಹಳೇ ದ್ವೇಷಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಮಂಡ್ಯ ಎಸ್.ಪಿ ಯತೀಶ್, ಎ.ಎಸ್‌ಪಿ ತಿಮ್ಮಯ್ಯ, ಡಿವೈಎಸ್‌ಪಿ ಮುರುಳಿ, ಇನ್ಸ್‌ಪೆಕ್ಟರ್‌ಗಳಾದ ಪ್ರಕಾಶ್, ಎ ಮಲ್ಲೇಶ್ ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…
ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…
ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…
ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…