ಮಂಡ್ಯ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ ಬೆಂಕಿ ಕೆಂಡದ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ಜತೆಗೆ ಅವರನ್ನು ರಕ್ಷಿಸಲು ಮುಂದಾದ ಅವರ ಸಹೋದರಿ ರಾಜೇಶ್ವರಿ ಕೂಡ ಗಾಯಗೊಂಡಿದ್ದಾರೆ.

ಕರಗ ಹೊತ್ತು ಏಳೆಂಟು ಹೆಜ್ಜೆ ಹಾಕಿದ್ದ ದೇವರ ಗುಡ್ಡಪ್ಪ ಬಿ.ಕುಮಾರ್‌ ಅವರ ಕಾಲಿಗೆ ಪಂಚೆ ಸಿಕ್ಕಿಕೊಂಡು ಮುಗ್ಗರಿಸಿ ಮಕಾಡೆ ಬಿದ್ದರು. ಮುತ್ತು ಮಾರಮ್ಮನ ಕರಗ ಅವರ ತಲೆಯ ಮೇಲಿಂದ ಕಳಚಿ ಕೆಂಡದ ಮೇಲೆ ಬಿತ್ತು. ಈ ವೇಳೆ ಕೊಂಡದಲ್ಲಿ ಬಿದ್ದ ಕುಮಾರ್‌ ಅವರನ್ನು ರಕ್ಷಿಸಲು ಹೋಗಿ ಅವರ ಸಹೋದರಿ ರಾಜೇಶ್ವರಿ ಕೂಡ ಗಾಯಗೊಂಡರು. ತಕ್ಷಣ ಪಕ್ಕದಲ್ಲಿದ್ದವರು ಇಬ್ಬರನ್ನೂ ಕೊಂಡದಿಂದ ಮೇಲೆ ಎತ್ತಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಕೆಲವರು ಸುಳ್ಳು ಸುದ್ದಿ ಎಂದು ಹೇಳುತ್ತಿದ್ದರು. ಆದರೆ ಇದು ಸುಳ್ಳು ಸುದ್ದಿ ಅಲ್ಲ. ಶ್ರೀರಂಗಪಟ್ಟಣ ವರದಿಗಾರರಿಂದ ಬಂದ ಮಾಹಿತಿ ಪ್ರಕಾರ ಈ ಘಟನೆ ಆಗಿರುವುದು ನಿಜ. ಹೀಗಾಗಿ ಇದು ಫೇಕ್‌ ನ್ಯೂಸ್‌ ಅಲ್ಲ.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago