ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯು 2024-25 ನೇ ಸಾಲಿನಲ್ಲಿ ಕಬ್ಬು ಅರೆಯಲು ಸಜ್ಜಾಗಿದ್ದು, ಜಿಲ್ಲಾ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು(ಜೂ.30) ಕಾರ್ಖಾನೆಯ ಬಾಯ್ಲರ್ ಗೆ ಪೂಜೆ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ. ಕಳೆದ 2023-24 ನೇ ಸಾಲಿನಲ್ಲಿ 2,41,305 ಮೆ.ಟನ್ ಕಬ್ಬು ನುರಿಸಲಾಗಿದೆ. ಕಬ್ಬು ಸರಬರಾಜು ಮಾಡಿದ ರೈತ-ಭಾಂದವರಿಗೆ ಸಂಪೂರ್ಣವಾಗಿ ಹಣವನ್ನು ಪಾವತಿಸಲಾಗಿದೆ. ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.