ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಹೊಸ ಟ್ರನ್ಸ್ ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದ್ದಾರೆ.
ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ರೈತರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಬ್ಬನ್ನು ಅರೆಯಲಾಗುವುದು. ಈ ಬಗ್ಗೆ ರೈತರಿಗೆ ಯಾವುದೇ ಆತಂಕ ಬೇಡ. ಕಬ್ಬು ಕಟಾವು ಕೆಲಸವನ್ನು ಸಹ ಯಾವುದೇ ತೊಂದರೆ ಇಲ್ಲದೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





