Mysore
29
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್‌ ಸಂಗ್ರಹ

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:-ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ

ಬೆಂಗಳೂರಿನಲ್ಲಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ನೀಡಿರುವ ಮಾಹಿತಿ ಆಧರಿಸಿ ಈ ಉತ್ತರವನ್ನು ಒದಗಿಸಲಾಗಿದೆ.

ಹೆದ್ದಾರಿಯಲ್ಲಿ ಮೂರು ಟೋಲ್ ಕೇಂದ್ರಗಳಿದ್ದು, ೨೦೨೨-೨೩ರಿಂದ ೨೦೨೫-೨೬ರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಿಮಿಣಿಕೆ ಕೇಂದ್ರದಲ್ಲಿ ೨೮೨.೧೪ ಕೋಟಿ ರೂ., ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಕೇಂದ್ರದಲ್ಲಿ ೨೪೮.೪೨ ಕೋಟಿ ರೂ.ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರಿನ ಕೇಂದ್ರದಲ್ಲಿ ೩೨೫.೨೩ ಕೋಟಿ ರೂ. ಟೋಲ್ ಸಂಗ್ರಹವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ನೀಡಿರುವ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!