ಮೈಸೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಅರ್ಹ ವಿಕಲಚೇತನ ವ್ಯಕ್ತಿಗಳಿಗೆ ವಿವಿಧ ಸೌಲಭ್ಯಗಳ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ)ಗಾಗಿ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, https://suvidha.karnataka.gov.in/ ಪೋರ್ಟಲ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಆಗಸ್ಟ್ 31 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಹೆಚ್.ಡಿ.ಕೋಟೆ ದೂ.ಸಂ:9611519719, ಸರಗೂರು ದೂ.ಸಂ:7090994492, ಹುಣಸೂರು : 9739644342, ಕೆ.ಆರ್ ನಗರ ದೂ.ಸಂ:9480253203, ಮೈಸೂರು ತಾಲ್ಲೂಕು. ದೂ.ಸಂ: 9591136015, 6360483829, ನಂಜನಗೂಡು-8951113120, ಪಿರಿಯಾಪಟ್ಟಣ-7204151852, ತಿ.ನರಸಿಪುರ-8050829685 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:0821-2490333 ನ್ನು ಸಂಪರ್ಕಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.