ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ.
ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. ಹಾಗೆಯೇ ಸಕ್ಕರೆ ನಾಡು ಮಂಡ್ಯದಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪೊಲೀಸ್ ಬ್ಯಾಂಡ್ ಆಯೋಜನೆ ಮಾಡಲಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಇಂತಹ ಸದಾವಕಾಶವನ್ನು ಜಿಲ್ಲೆಯ ಜನರಿಗೆ ಕಲ್ಪಿಸಿಕೊಟ್ಟಿದ್ದಾರೆ.
ಕನ್ನಡ ಪ್ರೇಮಿಗಳಿಗೆ ಹಾಗೂ ಸಾಹಿತ್ಯಾಸಕ್ತರಿಗೆ ನುಡಿಹಬ್ಬದ ಸವಿಯ ಜೊತೆಗೆ ಕರುನಾಡು ಮತ್ತು ಹೊರನಾಡಿನ ಕಲೆ, ಕಲಾ ಪ್ರಕಾರಗಳನ್ನು ಪ್ರದರ್ಶಿಸಲು ಸಾಂಸ್ಕೃತಿಕ ಸಮಿತಿ ವೇದಿಕೆ ಸಿದ್ಧಪಡಿಸಿದೆ. ನಾನಾ ಬಗೆಯ ಕಲೆ, ಕಲಾ ಪ್ರಕಾರಗಳನ್ನು ನಾಡಿನ ಜನತೆ ಎದುರು ಪ್ರದರ್ಶಿಸಲು ರಾಜ್ಯ, ಹೊರರಾಜ್ಯಗಳಿಂದ ಕಲಾವಿದರು, ಕಲಾ ತಂಡಗಳು ಮಂಡ್ಯಕ್ಕೆ ಆಗಮಿಸಲಿವೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್.22ರಂದು ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ನೋಡುಗರನ್ನು ಮನಸೂರೆಗೊಳಿಸಲಿದೆ.





