Mysore
21
mist

Social Media

ಸೋಮವಾರ, 30 ಡಿಸೆಂಬರ್ 2024
Light
Dark

ಕೋರ್ಟ್‌ ತೀರ್ಮಾನದ ಮೇಲೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್‌ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಬಗ್ಗೆ ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಿವೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಆಗಿದೆ ಅಷ್ಟೇ.

ಇನ್ನು ಕಾಂಗ್ರೆಸ್‌ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಈ ಪ್ರಕರಣ ಒಂದು ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳಿದ್ದಾರೆ.

ಕೋರ್ಟ್‌ ತೀರ್ಮಾನದ ಮೇಲೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ತೀರ್ಮಾನ ಆಗಲಿದೆ. ನಾಳೆಯ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.

 

Tags: