ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಬಗ್ಗೆ ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಿವೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಆಗಿದೆ ಅಷ್ಟೇ.
ಇನ್ನು ಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಈ ಪ್ರಕರಣ ಒಂದು ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳಿದ್ದಾರೆ.
ಕೋರ್ಟ್ ತೀರ್ಮಾನದ ಮೇಲೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ತೀರ್ಮಾನ ಆಗಲಿದೆ. ನಾಳೆಯ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…