ಮಂಡ್ಯ

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 113 ಕೋಟಿ ರೂ.ಆರ್ಥಿಕ ನೆರವು ನೀಡುವ ಮೂಲಕ ಕಾರ್ಖಾನೆಗೆ ಶಕ್ತಿ ನೀಡಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ತಿಳಿಸಿದರು.

ಪ್ರಸಕ್ತ ಸಾಲಿನ ಹಂಗಾಮಿಗೆ ಈಗಾಗಲೇ ಬಾಯ್ಲಿಂಗ್ ಹೌಸ್, ಬಾಯ್ಲರ್ ದುರಸ್ತಿ, ಕಾಕಂಬಿ ಟ್ಯಾಂಕ್ ನಿರ್ಮಾಣಕ್ಕೆ ಸುಮಾರು 74 ಕೋಟಿ ರೂ.ಗಳ ಅಂದಾಜು ಪಟ್ಟಿಯು ಸರ್ಕಾರದ ಅನುಮೋದನೆ ಹಂತದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಮೈಷುಗರ್ ಕಾರ್ಖಾನೆಯನ್ನು ಸಮರ್ಥವಾಗಿ ಮುನ್ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ಜಿಲ್ಲಾ ರೈತ ಹಿತಕ್ಷಣಾ ಸಮಿತಿಯವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.

ಕಳೆದ ಎರಡು ವರ್ಷಗಳಿಂದ ಮೈಷುಗರ್ ಕಾರ್ಖಾನೆಯನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆದಿದೆ. ಸ್ವಂತ ಸಾಮರ್ಥ್ಯದಿಂದ ಕೋ-ಜನ್ ಪ್ರಾರಂಭಿಸಿ 16 ಕೋಟಿ ರೂ. ವಿದ್ಯುತ್ ಉತ್ಪಾದನೆ ಮಾಡಲಾಗಿದ್ದು, ಈ ಹಿಂದೆ ನನೆಗುದಿಗೆ ಬಿದ್ದಿದ್ದ 270 ರೂ. ಕೋಟಿ ರೂ.ಗಳನ್ನು ಮೈಷುಗರ್‌ಗೆ ನೀಡಿ ಆರ್ಥಿಕವಾಗಿ ಶಕ್ತಿ ತುಂಬಲಾಗಿದೆ. 120 ಕೋಟಿ ರೂ. ಆದಾಯ ತೆರಿಗೆಯನ್ನು ಮನ್ನಾ ಮಾಡಲು ಹೋರಾಟ ಮಾಡಲಾಗಿತ್ತು. ಇದೀಗ ಅದನ್ನೂ ಮನ್ನಾ ಮಾಡಲು ಸರ್ಕಾರ ಸೂಚನೆ ನೀಡಿದೆ ಎಂದು ತಿಳಿಸಿದರು.

ರಾಜ್ಯಪಾಲರು ರಾಜೀನಾಮೆ ನೀಡಲಿ:ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್ ಮಾತನಾಡಿ, ಜಂಟಿ ಅಽವೇಶನದಲ್ಲಿ ರಾಜ್ಯಪಾಲರು ನಡೆದುಕೊಂಡ ರೀತಿ ಸರಿಯಲ್ಲ. ಸದನಕ್ಕೆ ಅಗೌರವದಿಂದ ನಡೆದುಕೊಂಡಿರುವ ಕಾರಣ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯಪಾಲರ ಧೋರಣೆಯನ್ನು ಖಂಡಿಸಿ ಬರುವ ಮಂಗಳವಾರ ಬೆಂಗಳೂರಿನಲ್ಲಿ ರಾಜಭವನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಮತ್ತು ಶಾಸಕರು, ಸಚಿವರ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಹಳ ಹಗುರವಾಗಿ ಮಾತನಾಡಿದ್ದಾರೆ. ಮಂಡ್ಯ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಮುಖಂಡರಾದ ಸಿ.ಎಂ. ದ್ಯಾವಪ್ಪ, ಸುಂಡಹಳ್ಳಿ ಮಂಜುನಾಥ್, ದೀಪಕ್, ನಾಗರಾಜು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

9 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago