Mysugar High School lease dispute Ravikumar Statement
ಮಂಡ್ಯ : ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕಾರ್ಖಾನೆ ಅಧ್ಯಕ್ಷರಿಗೆ ತಿಳಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮೈಷುಗರ್ ಪ್ರೌಢಶಾಲೆಗೆ ಸಂಬಂಽಸಿದಂತೆ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಗುತ್ತಿಗೆ ನೀಡಲು ಅಧ್ಯಕ್ಷರು ನಿರ್ಧರಿಸಿ ಪ್ರಕ್ರಿಯೆ ಅರಂಭಿಸಿದ್ದರು. ಆನಂತರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲ ಮುಖಂಡರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಬಹುತೇಕರು ಶಾಲೆಯನ್ನು ಗುತ್ತಿಗೆ ನೀಡುವುದಕ್ಕೆ ವಿರುದ್ಧ ಇರುವುದು ಕಂಡುಬಂದಿರುವ ಕಾರಣ ಗುತ್ತಿಗೆ ಪ್ರಕ್ರಿಯೆಯನ್ನು ಕೈಬಿಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಕಾರ್ಖಾನೆ ಆಸ್ತಿಯನ್ನು ಸುಮ್ಮನೆ ಖಾಲಿ ಬಿಡುವುದರಿಂದ ಪ್ರಯೋಜನವಿಲ್ಲ. ಪಾರಂಪರಿಕ ಎಂಬ ಹೆಸರಿನಲ್ಲಿ ಪಾಳು ಬಿಡುವುದೂ ಸರಿಯಲ್ಲ. ಆದಾಯ ಸೃಷ್ಟಿಸಿಕೊಳ್ಳಬೇಕಾದರೆ ಖಾಸಗಿಯವರ ಜೊತೆ ಕೈಜೋಡಿಸುವುದು ಇಂದಿನ ವಾಸ್ತವ ಸಂಗತಿ. ಬೆಂಗಳೂರಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಬಹುಮಹಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಆದಾಯ ಬರುವಂತೆ ಮಾಡಬಹುದು. ಮಂಡ್ಯದಲ್ಲಿ ಎಂ.ಸಿ.ರಸ್ತೆ ಆಸುಪಾಸಿನಲ್ಲಿರುವ ಕಾರ್ಖಾನೆ ಜಾಗದಲ್ಲಿ ಮಾಲ್ ನಿರ್ಮಿಸಿ ಆದಾಯದ ಮೂಲ ಸೃಷ್ಟಿಸಿಕೊಳ್ಳುವುದಕ್ಕೆ ಅವಕಾಶಗಳಿವೆ. ಈ ಬೆಳವಣಿಗೆ ಕಾಣಬೇಕಾದರೆ ಖಾಸಗಿಯವರೊಂದಿಗೆ ಶೇ.೫೦:೫೦ ಅನುಪಾತದಲ್ಲಿ ಕೈಜೋಡಿಸುವುದು ಅನಿವಾರ್ಯ. ಪಾಳುಬಿದ್ದಿರುವ ಮೈಷುಗರ್ ಈಜು ಕೇಂದ್ರವನ್ನು ಖಾಸಗಿಯವರ ನಿರ್ವಹಣೆಗೆ ನೀಡುವಾಗಲೂ ವಿರೋಧ ವ್ಯಕ್ತವಾಗಿದ್ದರಿಂದ ನಾನೂ ಸುಮ್ಮನಾದೆ ಎಂದರು.
ಅಭಿವೃದ್ಧಿಗಾಗಿ ಯಾರ ಬಳಿ ಹೋಗಲೂ ಸಿದ್ಧ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ೨೫ ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಿಎಸ್‌ಆರ್ ಫಂಡ್‌ನ ವ್ಯಾಪ್ತಿ ಅವರಿಗೆ ದೊಡ್ಡದಾಗಿರುವುದರಿಂದ ಹೆಚ್ಚು ಹಣವನ್ನು ದೊರಕಿಸಿಕೊಡುವ ಸಾಮರ್ಥ್ಯ ಅವರಿಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾರ ಬಳಿ ಹೋಗುವುದಕ್ಕೂ ಸಿದ್ಧನಿದ್ದೇನೆ. ಅವರು ಹಣ ನೀಡಿದಲ್ಲಿ ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು
ಸಭೆಯಲ್ಲಿ ಮೈಷುಗರ್ ಮಾಜಿ ಅಧ್ಯಕ್ಷರಾದ ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಕಬ್ಬು ಬೆಳೆಗಾರರ ಒಕ್ಕೂಟದ ಸಾತನೂರು ವೇಣುಗೋಪಾಲ್, ನಗರಸಭೆ ಸದಸ್ಯರಾದ ಎಚ್.ಎಸ್.ಮಂಜು, ಕುಮಾರ, ಪೂರ್ಣಿಮಾ, ಮುಖಂಡರಾದ ಶಿವನಂಜು, ಜಿ.ಎ.ರಮೇಶ್, ಹನಕೆರೆ ಶಶಿಕುಮಾರ್, ಗಿರೀಶ ಇತರರು ಭಾಗವಹಿಸಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…