Mysore
34
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಏ.7 ರಂದು ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ| ಜಿಲ್ಲಾಡಳಿದಿಂತ ಸಕಲ ಸಿದ್ಧತೆ ಆಗಿದೆ: ಎನ್‌.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಏಪ್ರಿಲ್‌.7 ರಂದು ಅದ್ದೂರಿಯಾಗಿ ಜರುಗಲಿದ್ದು, ಇದಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಿಂದ ಮಾತ್ರವಲ್ಲದೇ ನೆರೆ-ಹೊರೆಯ ರಾಜ್ಯಗಳಿಂದ ವೈರಮುಡಿ ಉತ್ಸವಕ್ಕೆ ಭಕ್ತರು ಆಗಮಿಸುತ್ತಿರುದರಿಂದ ಮೇಲುಕೋಟೆ ದೇವಸ್ಥಾನಕ್ಕೆ ಬರಲು 140 ಬಸ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ದಿನದ 24 ಗಂಟೆಯೂ ಪ್ರಸಾದ ವಿನಿಯೋಗವಿರುತ್ತದೆ ಎಂದರು.

ಇನ್ನೂ ಅಂದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಸುಮಾರು 1090 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ಮೇಲುಕೋಟೆ ಚೆಲುವನಾರಾಯಣನಿಗೆ ಶ್ರೀ ವೈರಮುಡಿ ಉತ್ಸವದ ಅಂಗವಾಗಿ ಕಿರೀಟಧಾರಣೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು.

Tags:
error: Content is protected !!