ಮಂಡ್ಯ

ಕಾವೇರಿ ಆರತಿಗೆ ರೈತ ಸಂಘ ವಿರೋಧ: ಸಚಿವ ಚಲುವರಾಯಸ್ವಾಮಿ ಹೇಳಿದ್ದಿಷ್ಟು.!

ಮಂಡ್ಯ: ಕಾವೇರಿ ಆರತಿಗೆ ರೈತ ಸಂಘ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರೈತರ ಜೊತೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ ಅಣೆಕಟ್ಟೆ ಬಳಿ ಕೈಗೊಳ್ಳಲಿರುವ ಅಮ್ಯೂಸ್‌ಮೆಂಟ್‌ ಪಾರ್ಕ್‌ ಮತ್ತು ಕಾವೇರಿ ಅರತಿ ಯೋಜನೆಗಳಿಗೆ ಏಕೆ ವಿರೋಧ ವ್ಯಕ್ತವಾಗುತ್ತಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ರೈತಸಂಘದ ಜೊತೆ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಸಮಸ್ಯೆಯನ್ನು ನಮಗೆ ಮನದಟ್ಟು ಮಾಡಿಕೊಡಲಿ. ನಿಜವಾಗಿಯೂ ಸಮಸ್ಯೆ ಇದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿ, ಈ ಯೋಜನೆ ನಿಲ್ಲಿಸುವ ತೀರ್ಮಾನ ಮಾಡೋಣ ಎಂದರು.

ಈ ಯೋಜನೆಗಳಿಂದ ಆರ್ಥಿಕತೆ ವೃದ್ಧಿ, ಉದ್ಯೋಗ ಸೃಷ್ಟಿ ಆಗುತ್ತದೆ. ಇದನ್ನು ರೈತಸಂಘದವರು ಅರ್ಥ ಮಾಡಿಕೊಳ್ಳಲಿ. ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಸಹ ರೈತರ ಪರವಾಗಿ ಬಂದು ಚರ್ಚೆ ಮಾಡಲಿ. ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಚರ್ಚೆ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

2 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

13 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

3 hours ago