ಮಂಡ್ಯ: ಹೊಳಲು ವೃತ್ತ- ಹೊಳಲು ಗ್ರಾಮದಿಂದ ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿವರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ರಸ್ತೆ ಪರಿಶೀಲನೆ ಮಾಡಿದರು.
ಈ ವೇಳೆ ದುದ್ದದಲ್ಲಿ ಮಾತನಾಡಿದ ಅವರು, ಮಂಡ್ಯದಿಂದ ಶ್ರವಣಬೆಳಗೊಳ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ. ಇನ್ನು ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಸಮಯದಲ್ಲಿ ಮಂಡ್ಯದಿಂದ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ಹೊಳಲು, ದುದ್ದ ರಸ್ತೆ ಹಾಳಾಗಿದೆ. ಆ ಸಮಯದಲ್ಲಿ ಮಣ್ಣನ್ನು ಸಾಗಿಸಲು ಈ ಮಾರ್ಗದಲ್ಲಿ ಹೆಚ್ಚು ಟಿಪ್ಪರ್‌ಗಳ ಸಂಚಾರವಾಗಿದ್ದು, ಪರಿಣಾಮ ಗುಂಡಿ ಬಿದ್ದಿವೆ ಎಂದರು.
ಹಾಳಾಗಿರುವ ರಸ್ತೆಯನ್ನು ಸರಿಪಡಿಸಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ಸರಿಪಡಿಸದೇ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿರುವ ಅನುದಾನವನ್ನು ಬಳಸಿಕೊಂಡು ಜನರಿಗೆ ಅನುಕೂಲವಾಗುವಂತೆ ರಸ್ತೆ ಮಾಡಿಕೊಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್‌ಗುಪ್ತಾ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಇಂಜಿನಿಯರ್ ವಿಜಯ್‌ಕುಮಾರ್, ಕಾರ್ಯಪಾಲಕ ಇಂಜಿನಿಯರ್ ಜಿ.ರಾಜು, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಸ್ತೆ ಪರಿಶೀಲನೆ ಸಂದರ್ಭದಲ್ಲಿ ಸಚಿವರು ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…