ಮಂಡ್ಯ: ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ.
ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದ್ದು, ಬಾಂಬ್ ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಸಂಪೂರ್ಣ ಛಿದ್ರವಾಗಿದ್ದು, ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ.
ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಬಿಂಡಿಗನವಿಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…