ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌಧರಿ ಅವರು ತಿಳಿಸಿದ್ದಾರೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ಇಂದು(ಡಿಸೆಂಬರ್.22) ಆಯೋಜಿಸಿದ್ದ “ಸ್ತ್ರೀ ಎಂದರೆ ಅಷ್ಟೇ ಸಾಕೇ?” ವಿಷಯದ ಗೋಷ್ಠಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಹೆಣ್ಣಿಗೆ ಹೋರಾಟದ ಮನೋಭಾವ ಬರಬೇಕು. ಹೆಣ್ಣು ಪ್ರತಿಯೊಂದು ವಿಷಯದಲ್ಲೂ ವಜ್ರದಂತೆ ಕಠಿಣವಾಗಬೇಕು ಎಂದಿದ್ದಾರೆ.
ಹೆಣ್ಣಿನ ಮೇಲಾಗುವ ದೌರ್ಜನ್ಯ, ಅಪಾರಧ ತಡೆಗೆ ನಮ್ಮಲ್ಲಿ ಕಠಿಣ ಕಾನೂನಿದೆ. ಆದರೆ ದೌರ್ಜನ್ಯ ಆದಾಗ ಕಾನೂನು ಹೋರಾಟಕ್ಕೆ ಹೆಣ್ಣು ಹಿಂದೇಟು ಹಾಕುತ್ತಿದ್ದಾಳೆ. ಅಲ್ಲದೇ ನಾನಾ ಒತ್ತಡಗಳಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಿಂಜರಿಯುತ್ತಾಳೆ. ಹೆಣ್ಣು ತಾನು ಎಲ್ಲಿಯವರೆಗೂ ಕಾನೂನು ಹೋರಾಟಕ್ಕೆ ಮುಂದಾಗುವುದಿಲ್ಲವೋ ಅಲ್ಲಿಯವರೆಗೆ ದೌರ್ಜನ್ಯ ಕಡಿಮೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಹೆಣ್ಣಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಬಲ ತುಂಬಿದ್ದು ಡಾ. ಬಿ.ಆರ್.ಅಂಬೇಡ್ಕರ್, ಸ್ತ್ರೀ ಚಳವಳಿ ಆರಂಭವಾಗಿದ್ದು ಬಸವಣ್ಣನವರ ಕಾಲದಲ್ಲಿ. ಹೆಣ್ಣಿಗೆ ಶಕ್ತಿ ನೀಡಬೇಕೆಂದರೆ ಅವಳಿಗೆ ವೇದಿಕೆ ಸಿಗಬೇಕು ಎಂದು ತಿಳಿಸಿದ್ದಾರೆ.
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…