ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರಾಗಿದ್ದು, ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ.
ಮೃತ ಮೋಹನ್ ಅವರಿಗೆ ಜಿಲ್ಲಾ ಸಚಿವರ ಸಂತಾಪ.
ರಸ್ತೆ ಅಪಘಾತದಲ್ಲಿ ನಾಗಮಂಗಲದ ಪತ್ರಕರ್ತರಾದ ಬಿ.ಸಿ.ಮೋಹನ್ ಕುಮಾರ್ ಅವರು ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.
ಮೋಹನ್ ಕುಮಾರ್ ಅವರು ಅತ್ಯಂತ ಕ್ರೀಯಾಶೀಲ ಪತ್ರಕರ್ತರಲ್ಲೊಬ್ಬರಾಗಿದ್ದರು.
ತಮ್ಮ ಬರವಣೆಗೆ ಮೂಲಕ ಅನೇಕ ಸಾಮಾಜಿಕ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಬಗೆಹರಿಸುವಲ್ಲಿ ಕಾರಣರಾಗಿದ್ದರು. ಅವರ ಅಕಾಲಿಕ ಸಾವು ತೀವ್ರ ದುಖ ತಂದಿದೆ.. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಬರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ
ಕೆಯುಡಬ್ಲ್ಯೂಜೆ ಸಂತಾಪ;
ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸಿದೆ. ಮೋಹನಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…