ಮಂಡ್ಯ

ನಾಗಮಂಗಲ ಗಲಭೆ ಪ್ರಕರಣ: 54ಆರೋಪಿಗಳ ಬಂಧನ

ಮಂಡ್ಯ: ನಿನ್ನೆ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಿಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು. ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ ಎಂದು ಚಲುವರಾಯಸ್ವಾಮಿ ಯವರು ತಿಳಿಸಿದರು..

ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು 54ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಪಾಲ್ಗೊಳ್ಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿಸಿಟಿವಿ ಪರಿಶೀಲಿಸಿ, ಖಚಿತಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ. ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ ಎಂದು ಸಚಿವರು ತಿಳಿಸಿದರು.

ಕೋಮು ಸೌಹಾರ್ದತೆಯನ್ನು ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ.

ಪರಿಹಾರದ ಭರವಸೆ
ಘಟನೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಅವುಗಳ ಮಾಲೀಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವ ಕ್ಷೇತ್ರ, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸುವುದಾಗಿ ಕೃಷಿ ಸಚಿವರು ತಿಳಿಸಿದರು.

ಮುಂದಿನ ಎರಡು ದಿನಗಳಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಹಾಗೂ ಎಸ್.ಪಿ. ನೇತ್ರತ್ವದಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಲಾಗಿದೆ.

ಈ ಘಟನೆಯನ್ನು ರಾಜಕೀಯವಾಗಿ ಬಳಸದೇ ವಿರೋಧ ಪಕ್ಷಗಳು ಸಹ ಜವಾಬ್ದಾರಿಯಿಂದ ವರ್ತಿಸಬೇಕು. ಹಾಗೆಯೇ, ಮಾಧ್ಯಮಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿಕೊಂಡರು‌‌‌‌.

ಅಮಾಯಕರನ್ನು ಬಂಧಿಸಲಾಗಿದೆ ಬಿಡುಗಡೆಗೊಳಿಸಿ ಎಂದು ನಾಗಮಂಗಕ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಎರಡೂ ಕೋಮಿನ ಜನರನ್ನು ಭೇಟಿ ಮಾಡಿ ಮಾತನಾಡಿದ ಸಚಿವರು.
ಈ ವರಗೆ 54 ಮಂದಿ ಬಂಧಿಸಲಾಗಿದೆ . ನೈಜ ತಪ್ಪಿತಸ್ಥ ರನ್ನು ಬಿಡುವ ಪ್ರಶ್ನೆ ಇಲ್ಲ ಅದರೆ
ಘಟನೆಯಲ್ಲಿ ಪಾಲ್ಗೊಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿ.ಸಿ ಟಿ.ವಿ ಪರಿಶೀಲಿಸಿ ಖಚಿತ ಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು..

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

4 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

56 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago