ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ ಎಂದು ಹೇಳಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮತಾಂಧರು ದೂರ್ತತನ ಪ್ರದರ್ಶಿಸಿದ್ದಾರೆ. ಗಣಪತಿ ಭಕ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಳಿ ನಡೆಸಿ ಕೋಮು ದಳ್ಳುರಿ ಹೊತ್ತಿಸಿ ಜನರು, ಪೊಲೀಸರ ಮೇಲೆ ಪೂರ್ವಯೋಜಿತವಾಗಿ ದೌರ್ಜನ್ಯ ನಡೆಸಿರುವುದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎನ್ನುವುದು ಸ್ಪಷ್ಟ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಲ್ಲುಗಳ ಸುರಿಮಳೆಗರೆದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಪ್ರಚೋದಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಇರುವುದರಿಂದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೇಶವಿರೋಧಿ ಶಕ್ತಿಗಳನ್ನು ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡುತ್ತಿರುವುದರ ನೇರ ಪರಿಣಾಮ ಇದಾಗಿದೆ. ಹಿಂದೂಗಳ ಮೇಲಿನ ಈ ದಾಳಿಗೆ ಪ್ರತಿಯಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…