ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.
ನಾಗಮಂಗಲದ ಗಲಭೆ ಪ್ರದೇಶಗಳಿಗೆ ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‍ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.
ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು.
ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.
ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…