ಮಂಡ್ಯ

ನಾಗಮಂಗಲ ಗಲಭೆ ಪೂರ್ವಯೋಜಿತ ಕೃತ್ಯ: ಎಚ್‌ಡಿಕೆ

ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ನಾಗಮಂಗಲದ ಗಲಭೆ ಪ್ರದೇಶಗಳಿಗೆ ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‍ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.

ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು. ‌

ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.

ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು.

 

andolana

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

2 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

3 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

3 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

3 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

3 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

3 hours ago