Mysore
21
overcast clouds
Light
Dark

ನಾಗಮಂಗಲ ಗಲಭೆ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

ಮೈಸೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬದ್ರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಮತ್ತು ಕಲ್ಲುತೂರಾಟ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ನೀಡಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಈ ತಂಡವನ್ನು ರಚಿಸಿದ್ದು, ಶಾಸಕ ಡಾ.ಸಿ.ಎನ್.ಅಶ್ವಥ ನಾರಾಯಣ, ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸತ್ಯ ಶೋಧನ ತಂಡದಲ್ಲಿದ್ದಾರೆ.

ಗಣಪತಿ ವಿಸರ್ಜನೆ ವೇಳೆ ಎರಡು ಕೋಮುಗಳ ನಡುವೆ ಗಲಭೆ ಉಂಟಾಗಿ ನಾಗಮಂಗಲದಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿತ್ತು. ಹಲವಾರು ಅಂಗಡಿಗಳು, ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು.

ಅಷ್ಟೇ ಅಲ್ಲದೇ ರಸ್ತೆ ಮಧ್ಯೆ ದುಷ್ಕರ್ಮಿಗಳು ಕತ್ತಿ ಹಿಡಿದು ಝಳಪಿಸಿದ್ದಾರೆ. ಸದ್ಯ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಸೆ.14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.