ಮಂಡ್ಯ: ನಾಗಮಂಗಲ ಪಟ್ಟಣದ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತ್ತು ಮಾಡಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ಅಶೋಕ್ ಕುಮಾರ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 11ರಂದು ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಎರಡು ಕೋಮಿನ ಯುವಕರ ನಡುವೆ ಗಲಭೆ ಉಂಟಾಗಿತ್ತು. ಈ ಗಲಭೆಯಲ್ಲಿ ಹಲವು ಅಂಗಡಿ ಮುಂಗಟ್ಟುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆ ಸಂಬಂಧ ಪೊಲೀಸರು 152 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿ ಈವರೆಗೆ 52 ಮಂದಿಯನ್ನು ಬಂಧಿಸಿದ್ದಾರೆ.