ಮಂಡ್ಯ

ನಾಗಮಂಗಲ ಗಲಭೆ ಪ್ರಕರಣ: ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅಮಾನತ್ತು

ಮಂಡ್ಯ: ನಾಗಮಂಗಲ ಪಟ್ಟಣದ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಪಟ್ಟಣ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅವರನ್ನು ಅಮಾನತ್ತು ಮಾಡಲಾಗಿದೆ.

ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ಅಶೋಕ್‌ ಕುಮಾರ್‌ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್‌ 11ರಂದು ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಎರಡು ಕೋಮಿನ ಯುವಕರ ನಡುವೆ ಗಲಭೆ ಉಂಟಾಗಿತ್ತು. ಈ ಗಲಭೆಯಲ್ಲಿ ಹಲವು ಅಂಗಡಿ ಮುಂಗಟ್ಟುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆ ಸಂಬಂಧ ಪೊಲೀಸರು 152 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಈವರೆಗೆ 52 ಮಂದಿಯನ್ನು ಬಂಧಿಸಿದ್ದಾರೆ.

andolana

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

1 hour ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

3 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

3 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

4 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

4 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

5 hours ago