ಮಂಡ್ಯ

ನಾಗಮಂಗಲ: ಹುಲಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಕುಂದು ಕೊರತೆ ಸಭೆ ನಡೆಸಿದ ಶೇಖ್ ತನ್ವಿರ್ ಆಸೀಫ್

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್‌ವೀರ್ ಆಸಿಫ್ ಅವರು ಆಗಸ್ಟ್ 29 ರಂದು ಬುಧವಾರ ನಾಗಮಂಗಲ ತಾಲ್ಲೂಕು ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ನಡೆಸಿದರು.
ಸಭೆಯಲ್ಲಿ ಸಾರ್ವಜನಿಕರಿಂದ ಲಿಖಿತವಾಗಿ ಒಟ್ಟು 18 ಕುಂದು ಕೊರತೆ ಅಹವಾಲುಗಳು ಸ್ವೀಕೃತಗೊಂಡಿದ್ದು, 18 ಅರ್ಜಿಗಳನ್ನು ಸ್ಥಳದಲ್ಲಿ ಇತ್ಯರ್ಥಗೊಳಿಸಲಾಯಿತು. ಇನ್ನುಳಿದ ಅರ್ಜಿಗಳಿಗೆ ಸಂಬಂಧಿಸಿದಂತೆ ನಿಯಮಾನುಸಾರ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮ ಪಂಚಾಯತ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಭೇಟಿ : ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆಲಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿಗಳನ್ನು ನೇಮಕ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದ್ದ ಮೇರೆಗೆ ಸದರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಮಾಡಿ ಪರಿಶೀಲಿಸಿ, ವೈದ್ಯರು ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು.
ಕಾಮಗಾರಿ ಪರಿಶೀಲನೆ: ಜೆ.ಜೆ.ಎಂ. ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿರುತ್ತದೆ ಹಾಗೂ ಕಾಮಗಾರಿಗೆ ಅಳವಡಿಸಿರುವ ಪೈಪ್ ಕಡಿಮೆ ಗುಣಮಟ್ಟದಿಂದ ಕೂಡಿದ್ದು ಅದನ್ನು ಸರಿಪಡಿಸಿಕೊಡಬೇಕೆಂದು ಗ್ರಾಮಸ್ಥರು ಮನವಿ ಸಲ್ಲಿಸಿದ್ದ ಮೇರೆಗೆ ಗ್ರಾಮದಲ್ಲಿ ಜೆ.ಜೆ.ಎಂ. ಯೋಜನೆಯಡಿ ಅನುಷ್ಟಾನಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನಾಗಮಂಗಲ ಉಪವಿಭಾಗ ಗ್ರಾ.ಕು.ನೀ.& ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಹುಲಿಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕಲ್ಯಾಣಿ ಕಾಮಗಾರಿಯನ್ನು ಪರಿಶೀಲಿಸಿದರು ಮತ್ತು ಸದರಿ ಯೋಜನೆಯಡಿ ಕೂಲಿಕಾರರ ಮಕ್ಕಳ ಆರೈಕೆಗಾಗಿ ಸ್ಥಾಪಿಸಲಾಗಿರುವ ಕೂಸಿನ ಮನೆ ಕೇಂದ್ರದಲ್ಲಿ ಕೂಸಿನ ಮನೆಗೆ ಬರುವ ಮಕ್ಕಳಿಗೆ ಸರ್ಕಾರದ ವೇಳಾಪಟ್ಟಿಯಂತೆ ಪ್ರತಿನಿತ್ಯ ಕಡ್ಡಾಯವಾಗಿ ಆಹಾರವನ್ನು ನೀಡುವಂತೆ ಮತ್ತು ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವಂತೆ ಕೇರ್ ಟೇಕರ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು.
ಶಾಲಾ ಭೇಟಿ : ಕೆಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಮತ್ತು ಬೋಧನೆ ವಿಚಾರ, ಸ್ವಚ್ಛತೆ, ಹಾಗೂ ಮಕ್ಕಳಿಗೆ ಗುಣಮಟ್ಟದ ಬಿಸಿಯೂಟ ನೀಡುತ್ತಿರುವ ಬಗ್ಗೆ ಪರಿಶೀಲಿಸಿ, ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಚಟುವಟಿಕೆ ಹಾಗೂ ಶುಚಿತ್ವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ನಂತರ ಕಟ್ಟಡ ನವೀಕರಣಕ್ಕೆ ಸಂಬಂಧಿಸಿದಂತೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು.
ನಂತರ ಶಾಲಾ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ ಶಾಲಾ ಕಾಂಪೌಂಡ್  ಕಾಮಗಾರಿ ಪರಿಶೀಲಿಸಿದರು.
ಹುಲಿಕೆರೆ ಗ್ರಾಮದ ಅನುದಾನಿತ ಆಧಿಶಕ್ತಿ ಫ್ರೌಡಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ಮಕ್ಕಳ ಜೊತೆ ಸಂವಾದ ನಡೆಸಿ, ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪರಿಶೀಲಿಸಲಾಯಿತು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಂತೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100% ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಸಂಬಂಧ ಅಗತ್ಯ ಕ್ರಮವಹಿಸುವಂತೆ ಶಿಕ್ಷಕರಿಗೆ ಸೂಚಿಸಿದರು.
ತದನಂತರ ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಡುಬುಡುಕೆ ಕಾಲೋನಿ ಗ್ರಾಮದ ಗ್ರಾಮಸ್ಥರು ಸುಮಾರು 10 ವರ್ಷಗಳಿಂದ ಗುಡಿಸಲಿನಲ್ಲಿ 20 ಕುಟುಂಬಗಳು ವಾಸಿಸುತ್ತಿದ್ದು, ಸದರಿರವರ ಜಾಗಕ್ಕೆ ಹಕ್ಕುಪತ್ರ ವಿತರಿಸಬೇಕೆಂದು ಅರ್ಜಿ ನೀಡಿದ್ದು, ಅರ್ಜಿಯ ಬಗ್ಗೆ ಪರಿಶೀಲಿಸಿ, ಸದರಿ ವಿಷಯದ ಕುರಿತು ವಸತಿ ನಿಗಮ ಹಾಗೂ ಕಂದಾಯ ಇಲಾಖೆಯ ಮಾರ್ಗಸೂಚಿಗಳನ್ವಯ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಂಬಂಧ ನಿಯಮಾನುಸಾರ ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

10 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

15 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago