ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಅಶೋಕ್ ವಿರುದ್ಧ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಯಾರೂ ಪಾಕ್ ಪರ ಘೋಷಣೆ ಕೂಗಿಲ್ಲ. ವಿಪಕ್ಷ ನಾಯಕ ಆರ್.ಅಶೋಕ್ ಸುಳ್ಳು ಹೇಳಿದ್ದಾರೆ. ಅಶೋಕ್ ಮೇಲೆಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಿಡಿಕಾರಿದರು.
ಮಾತನಾಡುವಾಗ ಅಶೋಕ್ ಮಾತಿನಲ್ಲಿ ಸ್ವಲ್ಪ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಅಶೋಕ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕನಾಗಿ ಸರಿಯಾಗಿ ಮಾತನಾಡೋದನ್ನು ಕಲಿಯಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ನಾಗಮಂಗಲದಲ್ಲಿ ನಡೆದ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿಲ್ಲ. ಇದೆಲ್ಲಾ ಸುಳ್ಳುಸುದ್ದಿ. ಹಾಗಾಗಿ ವಿಪಕ್ಷದವರು ಹೇಳುವುದನ್ನು ಯಾರೂ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.
ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…