ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ.
ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಭೈರತಿ ಬಸವರಾಜ್, ನಾರಾಯಣಗೌಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಒಳಗೊಂಡ ಬಿಜೆಪಿ ಸತ್ಯಶೋಧನಾ ಸಮಿತಿ ಒಂದು ನಾಗಮಂಗಲಕ್ಕೆ ಭೇಟಿ ನೀಡಲಿದೆ.
ಘಟನೆ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲು ಬಿಜೆಪಿ ನಿಯೋಗ ಭೇಟಿ ನೀಡಲಿದ್ದು, ಘಟನೆ ನಡೆದ ದಿನ ಏನಾಯಿತು ಎನ್ನುವ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಿದೆ.
ಮಾಹಿತಿ ಕಲೆಹಾಕಿದ ಬಳಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಬದ್ರಿಕೊಪ್ಪಲು ಬಡಾವಣೆಗೂ ಬಿಜೆಪಿ ನಿಯೋಗ ಭೇಟಿ ನೀಡಲಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರ ಕಲೆಹಾಕಲಿದೆ.
ಇನ್ನು ಗಲಭೆಯಲ್ಲಿ ಸಂಪೂರ್ಣ ಹಾನಿಗೊಳಗಾದ ಅಂಗಡಿ ಮಳಿಗೆಗಳನ್ನು ಸಹ ಪರಿಶೀಲನೆ ನಡೆಸಲಾಗುತ್ತದೆ. ಬಿಜೆಪಿ ನಾಯಕರ ನೇತೃತ್ವದ ಸಮಿತಿಗೆ ಜೆಡಿಎಸ್ ಮುಖಂಡರು ಕೂಡ ಸಾಥ್ ನೀಡಲಿದ್ದಾರೆ.





