ಮಂಡ್ಯ

ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮೈಸೂರಿನ ಮಹಾಶಿಲ್ಪಿ: ಆರ್.‌ಅಶೋಕ್‌

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು ಹಾಕುತ್ತಿರುವುದು ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರಲ್ಲದೇ ಟಿಪ್ಪು ಸುಲ್ತಾನನೊಬ್ಬ ನಾಡದ್ರೋಹಿ, ಪರ್ಶಿಯಾದವನು, ಮತಾಂಧ, ಸಾವಿರಾರು ಹಿಂದೂಗಳನ್ನು ಕೊಂದು ದೇವಾಲಯಗಳನ್ನು ಕೆಡವಿದವನು ಅಂತವನ ಹೆಸರು ಕೆಆರ್‌ಎಸ್ ಗೆ ಇಡಲು ಹೊರಟಿರುವುದು ಕಾಂಗ್ರೆಸ್‌ ಮನಸ್ಥಿತಿಯನ್ನ ತೋರಿಸಿದೆ ಎಂದು ಕಿಡಿಕಾರಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತದಲ್ಲಿ ಹಳೇ ಮೈಸೂರು ಸಾಕಷ್ಟು ಅಭಿವೃದ್ಧಿ ಕಂಡಿತ್ತು. ಕೆಆರ್‌ಎಸ್ ಜಲಾಶಯ ನಿರ್ಮಾಣಕ್ಕೆ ಯಾರ ಮೇಲೂ ತೆರಿಗೆ ಹಾಕಿರಲಿಲ್ಲ. ಆದರೆ ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ 2 ಲಕ್ಷ ಕೋಟಿ ಸಾಲ ಮಾಡಿ, ಜನರ ಮೇಲೆ ತೆರಿಗೆಯ ಬರೆ ಎಳೆದಿದೆ. ಇಂಥ ಮುಖ್ಯಮಂತ್ರಿಯನ್ನ ನಾಲ್ವಡಿ ಹೋಲಿಕೆ ಮಾಡುವುದು ಕೂಡ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಗೌರವ ಉಳಿಯಬೇಕಾದ್ರೆ ಕೂಡಲೇ ರಾಜ್ಯದ ಜನತೆ, ನಾಲ್ವಡಿ ಕುಟುಂಬಕ್ಕೆ ಕ್ಷಮಾಪಣೆ ಕೇಳಿ. ಹೀಗೆ ಮಾತನಾಡಿದ್ರೆ ಜನರು ನಿಮ್ಮ ಪಕ್ಷವನ್ನು ಧೂಳಿಪಟ ಮಾಡ್ತಾರೆ. ತಕ್ಷಣವೇ ರಾಜಮನೆತನಕ್ಕೆ ಕ್ಷಮೆಯಾಚಿಸಿ ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

3 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

3 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

4 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

4 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

4 hours ago